![WhatsApp Image 2022-11-21 at 4.51.08 PM](https://i0.wp.com/thrishulnews.com/wp-content/uploads/2022/11/WhatsApp-Image-2022-11-21-at-4.51.08-PM.jpeg?fit=768%2C512&ssl=1?v=1669029810)
![](https://i0.wp.com/thrishulnews.com/wp-content/uploads/2024/03/WhatsApp-Image-2024-03-12-at-11.54.26-AM.jpeg?fit=1050%2C600&ssl=1)
ಮಂಗಳೂರು: ಆಟೋ ರಿಕ್ಷಾದಲ್ಲಿ ಕುಕ್ಕರ್ ಬಾಂಬ್ ಸ್ಫೋಟದ ಬೆನ್ನಲ್ಲೇ ನಗರದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಅನುಮಾನಾಸ್ಪದ ಬ್ಯಾಗ್ ಪತ್ತೆಯಾಗಿದ್ದು, ಆತಂಕ ಸೃಷ್ಟಿಸಿದ ಘಟನೆ ನಡೆದಿದೆ.
ಮಂಗಳೂರಿನ ಬಸ್ ನಿಲ್ದಾಣದಲ್ಲಿ ಇಂದು ಮಧ್ಯಾಹ್ನದ ವೇಳೆಗೆ ಅನುಮಾನಾಸ್ಪದ ಬ್ಯಾಗ್ ಪತ್ತೆಯಾಗಿತ್ತು. ನ.19 ರಂದು ನಗರದ ಗರೋಡಿಯಲ್ಲಿ ರಿಕ್ಷಾದಲ್ಲಿ ಕುಕ್ಕರ್ ಬಾಂಬ್ ಸ್ಫೋಟವಾಗಿರುವುದರಿಂದ ಆತಂಕ ಸೃಷ್ಟಿಯಾಗಿತ್ತು. ಇದಕ್ಕೆ ಸಂಬಂಧಿಸಿದಂತೆ ಆರೋಪಿಯ ಗುರುತು ಇಂದಷ್ಟೇ ಪತ್ತೆಯಾಗಿತ್ತು. ಇದಾದ ಕೆಲಹೊತ್ತಿನಲ್ಲಿ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಅನುಮಾನಾಸ್ಪದ ಬ್ಯಾಗ್ ಕಂಡು ಬಂದಿತ್ತು.
ಬಸ್ ನಿಲ್ದಾಣದಲ್ಲಿ ಆತಂಕ ಸೃಷ್ಟಿಸಿದ ಬ್ಯಾಗ್
ಬಾಂಬ್ ನಿಗ್ರಹ ದಳ, ಶ್ವಾನದಳ ತಕ್ಷಣವೇ ಬಸ್ ನಿಲ್ದಾಣಕ್ಕೆ ಬಂದು ಪರಿಶೀಲನೆ ನಡೆಸಿತು. ಆ ಬಳಿಕ ಬ್ಯಾಗ್ ವಾರಸುದಾರ ಪತ್ತೆಯಾಗಿದ್ದು, ಇದು ಪ್ರಯಾಣಿಕನ ಬ್ಯಾಗ್ ಎಂದು ಗೊತ್ತಾದಾಗ ಆತಂಕ ನಿವಾರಣೆಯಾಗಿದೆ.