December 5, 2025
WhatsApp Image 2025-11-20 at 12.35.37 PM

ಬೆಂಗಳೂರು : ದ್ವಿಚಕ್ರ ವಾಹನಗಳಲ್ಲಿ ಸಂಚಾರ ಮಾಡುವ ಮಕ್ಕಳಿಗೆ ಹೆಲ್ಮೆಟ್ ಮತ್ತು ಸುರಕ್ಷತಾ ಕ್ರಮಗಳುಳ್ಳ ಕೇಂದ್ರ ಮೋಟಾರು ವಾಹನ (ಎರಡನೇ ತಿದ್ದುಪಡಿ) ನಿಯಮಗಳು ೨೦೨೨ರ ನಿಯಮ ೧೩೮ರ ಅನುಷ್ಠಾನಕ್ಕೆ ಸಂಬಂಧಿಸಿದಂತೆ ತಕ್ಷಣ ಕ್ರಮಕ್ಕೆ ಮುಂದಾಗಬೇಕು ಎಂದು ಸರ್ಕಾರಕ್ಕೆ ಉಚ್ಚ ನ್ಯಾಯಾಲಯ ನಿರ್ದೇಶನ ನೀಡಿದೆ.

ಶಿವಮೊಗ್ಗದ ಖಾಸಗಿ ವೈದ್ಯಕೀಯ ಕಾಲೇಜಿನಲ್ಲಿ ಮನೋವಿಜ್ಞಾನ ವಿಭಾಗದ ಸಹಾಯಕ ಪ್ರೊಫೆಸರ್ ಮತ್ತು ಮುಖ್ಯಸ್ಥರಾದ ಕೆ. ಅರ್ಚನಾ ಭಟ್ ಎಂಬವರು ೨೦೨೩ರಲ್ಲಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಮತ್ತು ನ್ಯಾಯಮೂರ್ತಿ ಸಿ.ಎಂ.ಪೂಣಚ್ಚ ಅವರಿದ್ದ ನ್ಯಾಯಪೀಠ ಈ ಸೂಚನೆ ನೀಡಿ, ಅರ್ಜಿಯನ್ನು ಇತ್ಯರ್ಥಪಡಿಸಿತು.

ಅಲ್ಲದೆ, ಕೇಂದ್ರ ಮೋಟಾರು ವಾಹನ ನಿಯಮಗಳನ್ನು ಜಾರಿಗೆ ತರುವಲ್ಲಿ ಅಧಿಕಾರಿಗಳು ಹಲವು ಕ್ರಮಗಳನ್ನು ಕೈಗೊಂಡಿದ್ದರೂ, ವಾಸ್ತವವಾಗಿ ಜಾರಿಗೆ ಬಂದಿಲ್ಲ. ಹೀಗಾಗಿ ನಿಯಮಗಳನ್ನು ಜಾರಿಗೆ ತರಲು ಸರ್ಕಾರ ತಕ್ಷಣ ಪರಿಣಾಮಕಾರಿ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಪೀಠ ಹೇಳಿದೆ.

 

ಜಾಗೃತಿ ಮುಂದುವರೆರಿಸಿ
ಮಾರುಕಟ್ಟೆಯಲ್ಲಿ ಸುರಕ್ಷತಾ ಪರಿಕರಗಳ ಲಭ್ಯತೆ ಖಚಿತಪಡಿಸಿಕೊಂಡ ಬಳಿಕ ರಾಜ್ಯದಲ್ಲಿ ನಿಯಮವನ್ನು ಜಾರಿಗೊಳಿಸಲು ಅಧಿಕಾರಿಗಳಿಗೆ ಪೀಠ ೬ ತಿಂಗಳ ಕಾಲಾವಕಾಶವನ್ನು ನೀಡಿತು. ಜೊತೆಗೆ ೯ ತಿಂಗಳಿಂದ ನಾಲ್ಕು ವರ್ಷದೊಳಗಿನ ಮಗುವನ್ನು ಹಿಂಬದಿ ಸವಾರನಾಗಿ ಸಾಗಿಸುವಾಗ ಮೋಟಾರ್ ಸೈಕಲ್ ಸವಾರನು ಹೆಲ್ಮೆಟ್ ಮತ್ತು ಸುರಕ್ಷತಾ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಈ ಸಂಬಂಧ ಜಾಗೃತಿ ಮೂಡಿಸುವ ಕಾರ್ಯಕ್ರಮವನ್ನು ಮುಂದುವರಿಸಬೇಕು ಎಂದು ಇದೇ ವೇಳೆ ಅಧಿಕಾರಿಗಳಿಗೆ ಪೀಠ ನಿರ್ದೇಶನ ನೀಡಿದೆ.

ವಿಚಾರಣೆ ವೇಳೆ, ಸರ್ಕಾರದ ಪರ ವಕೀಲರು, ತಯಾರಕರಿಂದ ಪಡೆದ ಮಾಹಿತಿಯನ್ನು ಉಲ್ಲೇಖಿಸಿ, ಹೊಸ ಸುರಕ್ಷತಾ ಪರಿಕರಗಳು ಮಾರುಕಟ್ಟೆಯಲ್ಲಿ ಮಾರಾಟ ಮಾಡುವ ಮೊದಲು ಪರೀಕ್ಷೆಗಳಿಗೆ ಒಳಗಾಗಬೇಕಾಗಿದೆ. ಆದ್ದರಿಂದ ಅವುಗಳ ತಯಾರಿಕೆಗೆ ಸಮಯ ಅಗತ್ಯವಿದೆ ಎಂದು ಪೀಠಕ್ಕೆ ತಿಳಿಸಿದರು.

ಹೊಸ ನಿಯಮಗಳು
ಮಕ್ಕಳಿಗಾಗಿ ಸುರಕ್ಷತಾ ಪರಿಕರಗಳನ್ನು ಕೇಂದ್ರ ಮೋಟಾರು ವಾಹನ (ಎರಡನೇ ತಿದ್ದುಪಡಿ) ನಿಯಮಗಳು, ೨೦೨೨ರ ಸೆಕ್ಷನ್ ೧೩೮(೭)ರ ಮೂಲಕ ಪರಿಚಯಿಸಲಾಗಿದೆ, ಇದನ್ನು ಫೆಬ್ರವರಿ ೧೫, ೨೦೨೨ರಂದು ಮೋಟಾರು ವಾಹನ ಕಾಯ್ದೆಯ ಸೆಕ್ಷನ್ ೧೨೯ರ ಅಡಿ ಸೂಚಿಸಲಾಗಿದೆ. ಸುರಕ್ಷತಾ ಸಲಕರಣೆಗಳ ಜೊತೆಗೆ, ನಾಲ್ಕು ವರ್ಷ ವಯಸ್ಸಿನ ಮಗುವನ್ನು ಹಿಂಬದಿ ಸವಾರನಾಗಿ ಸಾಗಿಸುವಾಗ ಮೋಟಾರ್‌ಸೈಕಲ್ ವೇಗವು ಗಂಟೆಗೆ ೪೦ ಕಿ.ಮೀ.ಗಿಂತ ಹೆಚ್ಚಿರಬಾರದು ಎಂದು ಹೊಸ ನಿಯಮಗಳು ತಿಳಿಸಲಿವೆ

About The Author

Leave a Reply

Your email address will not be published. Required fields are marked *

You cannot copy content of this page.