
ಮಲ್ಪೆ: ಪ್ರವಾಸಕ್ಕೆ ಮಲ್ಪೆಗೆ ಬಂದಿದ್ದ ವ್ಯಕ್ತಿಯೊಬ್ಬರು ರೂಮಿನಲ್ಲಿ ಮಲಗಿದ್ದಲ್ಲಿಯೇ ಮೃತಪಟ್ಟ ಬಗ್ಗೆ ವರದಿಯಾಗಿದೆ. ಮೃತರನ್ನು ಬೆಂಗಳೂರು ಆನೇಕಲ್ ನಿವಾಸಿ ಧನಂಜಯ್ ಕೆ.ಎನ್.(37) ಎಂದು ಗುರುತಿಸಲಾಗಿದೆ. ಇವರು ಸುಮಾರು 4 ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು ಎನ್ನಲಾಗಿದೆ. ಎ.19ರಂದು ಸಂಜೆ ಸ್ನೇಹಿತರೊಂದಿಗೆ ಮಲ್ಪೆಗೆ ಪ್ರವಾಸಕ್ಕೆ ಬಂದು ರೂಮಿನಲ್ಲಿ ಮಲಗಿದ್ದರು.
ಎ.20ರಂದು ಮಧ್ಯಾಹ್ನ ಮಲಗಿದ್ದ ಇವರು ತೀವ್ರವಾಗಿ ಅಸ್ವಸ್ಥಗೊಂಡು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.ಈ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
