April 22, 2026
WhatsApp Image 2026-04-22 at 11.51.23 AM

ತುಮಕೂರು: ಕಬಡ್ಡಿ ಪಂದ್ಯಾವಳಿಯ ವೇಳೆ 500 ರೂಪಾಯಿ ಬೆಟ್ಟಿಂಗ್ ಕಟ್ಟಿದ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರಿಗೆ ಕಾನೂನು ಸಂಕಷ್ಟ ಎದುರಾಗಿದೆ. ಅವರ ವಿರುದ್ಧ ಎಫ್‌ಐಆರ್ ದಾಖಲಿಸಿ ತನಿಖೆ ನಡೆಸುವಂತೆ ನ್ಯಾಯಾಲಯವು ಪೊಲೀಸರಿಗೆ ಮಹತ್ವದ ಆದೇಶ ನೀಡಿದೆ.

ಇತ್ತೀಚೆಗೆ ನಡೆದ ಕಬಡ್ಡಿ ಟೂರ್ನಿಯೊಂದರಲ್ಲಿ ಭಾಗವಹಿಸಿದ್ದ ಗೃಹ ಸಚಿವರು, ಆಟದ ಭರದಲ್ಲಿ 500 ರೂಪಾಯಿ ಬೆಟ್ಟಿಂಗ್ ಕಟ್ಟುವುದಾಗಿ ಹೇಳಿಕೆ ನೀಡಿದ್ದರು. ಸಾರ್ವಜನಿಕವಾಗಿ ಜವಾಬ್ದಾರಿಯುತ ಸ್ಥಾನದಲ್ಲಿರುವ ವ್ಯಕ್ತಿಯೇ ಬೆಟ್ಟಿಂಗ್ ಪ್ರೋತ್ಸಾಹಿಸುವುದು ಅಥವಾ ಅದರಲ್ಲಿ ಭಾಗಿಯಾಗುವುದು ಅಪರಾಧ ಎಂದು ಆಕ್ಷೇಪ ವ್ಯಕ್ತಪಡಿಸಿ ಹೆಚ್.ಆರ್. ನಾಗಭೂಷಣ್ ಎಂಬುವರು ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದರು.

ಈ ದೂರನ್ನು ವಿಚಾರಣೆ ನಡೆಸಿದ ಬೆಂಗಳೂರಿನ 42ನೇ ಎಸಿಜೆಎಂ (ACJM) ನ್ಯಾಯಮೂರ್ತಿ ಕೆ.ಎನ್. ಶಿವಕುಮಾರ್ ಅವರು, ಗೃಹ ಸಚಿವರ ವಿರುದ್ಧ ಪ್ರಕರಣ ದಾಖಲಿಸಿ ತನಿಖೆ ನಡೆಸಲು ಆದೇಶಿಸಿದ್ದಾರೆ. ಈ ಕುರಿತು ಸೂಕ್ತ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ತುಮಕೂರಿನ ಕೂಡಿಗೇಹಳ್ಳಿ ಪೊಲೀಸ್ ಠಾಣೆಗೆ ನ್ಯಾಯಾಲಯ ಸೂಚನೆ ನೀಡಿದೆ

About The Author

Leave a Reply

Your email address will not be published. Required fields are marked *

You cannot copy content of this page.