March 20, 2026
WhatsApp Image 2025-05-22 at 4.28.15 PM

ಬೆಂಗಳೂರು : ಕನ್ನಡದ ಕಿರುತೆರೆಯಲ್ಲಿ ಪ್ರಸಾರವಾಗುತ್ತಿದ್ದ ‘ಕಾಮಿಡಿ ಕಿಲಾಡಿಗಳು’ ಖ್ಯಾತಿಯ ನಟ ಮಡೆನೂರು ಮನು ವಿರುದ್ಧ ಕಿರುತೆರೆ ನಟಿಯೊಬ್ಬರು ಅತ್ಯಾಚಾರದ ಗಂಭೀರ ಆರೋಪ ಮಾಡಿದ್ದು ಈ ಸಂಬಂಧ ನಟನ ವಿರುದ್ಧ FIR ದಾಖಲಾಗಿದೆ. ಈ ಯುವತಿ ಹಾಗೂ ಮನು ‘ಕಾಮಿಡಿ ಕಿಲಾಡಿಗಳು’ ಶೋನಲ್ಲಿ ಒಟ್ಟಾಗಿ ಕೆಲಸ ಮಾಡಿದ್ದರು. ಅತ್ಯಾಚಾರದಿಂದ ತಾವು ಎರಡು ಬಾರಿ ಪ್ರೆಗ್ನೆಂಟ್ ಆಗಿದ್ದಾಗಿಯೂ ಸಂತ್ರಸ್ತೆ ದೂರಿನಲ್ಲಿ ತಿಳಿಸಿದ್ದಾರೆ. ಈ ದೂರನ್ನು ಆಧರಿಸಿ ಪೊಲೀಸರು ಮನು ಮೇಲೆ ಕೇಸ್ ದಾಖಲು ಮಾಡಿಕೊಂಡಿದ್ದಾರೆ.

ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್​ ದಾಖಲಾಗಿದ್ದು,ಕಿರುತೆರೆ ನಟಿಯೊಬ್ಬರು ಇವರ ವಿರುದ್ಧ ಈ ರೀತಿಯ ಆರೋಪ ಹೊರಿಸಿದ್ದಾರೆ. ದೂರು ದಾಖಲಾಗುತ್ತಿದ್ದಂತೆ ನಾಪತ್ತೆಯಾಗಿದ್ದ ನಟ ಮಡೆನೂರು ಮನು ನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.ಸಂತ್ರಸ್ಥ ನಟಿ ಆರೋಪಿಸಿರುವಂತೆ ಚಿತ್ರರಂಗದಲ್ಲಿ ಕೆಲಸ ಮಾಡುವಾಗ ಮಡೆನೂರು ಮನುಗೆ ಕಿರುತೆರೆ ನಟಿ ಪರಿಚಯ ಆಗಿದೆ. ಆ ಬಳಿಕ ಇವರ ಮಧ್ಯೆ ಗೆಳೆತನ ಬೆಳೆದಿದೆ. ಈಗ ‘ನನ್ನ ಮೇಲೆ ಮನು ಅತ್ಯಾಚಾರ ಮಾಡಿದ್ದಾನೆ. ಅಲ್ಲದೆ ಬಲವಂತವಾಗಿ ನನ್ನ ನಗ್ನ ವಿಡಿಯೋ ರೆಕಾರ್ಡ್ ಮಾಡಿಕೊಂಡಿದ್ದಾನೆ ಎಂದು ನಟಿ ಆರೋಪಿಸಿದ್ದಾರೆ. ಸಂತಸ್ತೆಗೆ ಮನು ನಾಗರಭಾವಿಯಲ್ಲಿ ಬಾಡಿಗೆ ಮನೆ ಹುಡುಕಿಕೊಟ್ಟಿದ್ದ. 2018ರಿಂದಲೂ ಮನುವಿನ ಪರಿಚಯ ಸಂತ್ರಸ್ತೆಗೆ ಇತ್ತು. ‘ಕಾಮಿಡಿ ಕಿಲಾಡಿಗಳು’ ಕಾರ್ಯಕ್ರಮದಲ್ಲಿ ಇಬ್ಬರೂ ಜೊತೆಯಾಗಿ ಕೆಲಸ ಮಾಡಿದ್ದರು. ಮೊದಲಿಗೆ ಪರಿಚಯ ಆಗಿ ಸ್ನೇಹ ಬೆಳೆದಿತ್ತು. ಒಮ್ಮೆ ಶಿಕಾರಿಪುರಕ್ಕೆ ಹೋದಾಗ ಹೋಟೆಲ್ ರೂಂಗೆ ಮನು ನಟಿಯನ್ನು ಕರೆಸಿಕೊಂಡಿದ್ದರು. ಬಳಿಕ ನನ್ನ ಮೇಲೆ ಅತ್ಯಾಚಾರ ಮಾಡಿದ್ದಾಗಿ ಅವರು ಆರೋಪಿಸಿದ್ದಾರೆ. ಈ ವೇಳೆ ಅವರು ಪ್ರೆಗ್ನೆಂಟ್ ಕೂಡ ಆಗಿದ್ದರು. ಆ ಬಳಿಕ ಮನು ಮಾತ್ರೆ ನೀಡಿ ಗರ್ಭಪಾತ ಮಾಡಿಸಿದ್ದರು ಎಂದು ನಟಿ ಆರೋಪಿಸಿದ್ದಾರೆ.

About The Author

Leave a Reply

Your email address will not be published. Required fields are marked *

You cannot copy content of this page.