

ಮಣಿಪಾಲ: ಶಿವಳ್ಳಿ ಗ್ರಾಮದ ವಿದ್ಯಾರತ್ನ ನಗರದಲ್ಲಿರುವ ಭವಾನಿ ಎಂಬ ಹೆಸರಿನ ಮನೆಯಲ್ಲಿ ಅನೈತಿಕ ವೇಶ್ಯಾವಾಟಿಕೆ ನಡೆಸುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿ ಮೇರೆಗೆ ಮನೆಯೊಂದರ ಮೇಲೆ ದಾಳಿ ಮಾಡಿ ಅನೈತಿಕ ವೇಶ್ಯಾವಾಟಿಕೆ ವ್ಯವಹಾರ ನಡೆಸುತ್ತಿದ್ದ ಅಬ್ದುಲ್ ಸಲಾಮತ್, ಚಂದ್ರಹಾಸ ಎಂಬುವರನ್ನು ವಶಕ್ಕೆ ಪಡೆದು,5 ಜನ ನೊಂದ ಮಹಿಳೆಯರನ್ನು ರಕ್ಷಣೆ ಮಾಡಿದ್ದಾರೆ. 3 ಯುವತಿಯರು ಬೆಂಗಳೂರು ಮೂಲದ ನಿವಾಸಿಗಳಾಗಿದ್ದು, ಇನ್ನಿಬ್ಬರು ಮಹಾರಾಷ್ಟ್ರದ ನಾಸಿಕ್ ಹಾಗೂ ಮುಂಬೈ ವಾಸಿಗಳಾಗಿದ್ದಾರೆ. ವೇಶ್ಯಾವಾಟಿಕೆ ವ್ಯವಹಾರಕ್ಕೆ ಬಳಸಿದ 4 ಮೊಬೈಲ್ ಫೋನ್, 1 ಕಾರು , 2 ಮೋಟಾರ್ ಸೈಕಲ್ ಹಾಗೂ 10,000 ನಗದನ್ನು ಸ್ವಾದೀನಪಡಿಸಿಕೊಂಡು ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಅನೈತಿಕ ಚಟುವಟಿಕೆ ಮಾಡಲು ವ್ಯಕ್ತಿಗಳಿಂದ ಹಣವನ್ನು ಸಂಗ್ರಹಿಸಿ ಅನೈತಿಕ ಚಟುವಟಿಕೆಗೆ ಕೊಠಡಿಗಳನ್ನು ಒದಗಿಸಿದ ಪ್ರಮುಖ ಆರೋಪಿ ಖಾಲಿದ್ ಎಂಬಾತ ಸ್ಥಳದಿಂದ ಪರಾರಿಯಾಗಿರುತ್ತಾನೆ. ಅದೇ ರೀತಿ ಶಾಂತಿನಗರದ ಮನೆಯ ಮೇಲೆ ಬ್ರಹ್ಮಾವರ ಸಿ.ಪಿ.ಐ ದಿವಾಕರ್ ನೇತೃತ್ವದಲ್ಲಿ ದಾಳಿ ಮಾಡಿ ಸದರಿ ಮನೆಯನ್ನು ವೇಶ್ಯಾವಾಟಿಕೆಗೆ ಚಟುವಟಿಕೆಗೆ ಬಳಸುತ್ತಿರುವ ಬಗ್ಗೆ ಮಾಹಿತಿ ಕಲೆ ಹಾಕಿ ಮನೆಯನ್ನು ಜಫ್ತಿ ಮಾಡಲಾಗಿದ್ದು ತನಿಖೆ ಮುಂದುವರೆದಿದೆ.