ನಂದಿನಿ ಹಾಲಿನ ದರ ಏರಿಕೆ- ಆ. 1 ರಿಂದ ಲೀಟರ್ ಹಾಲಿಗೆ 3 ರೂ. ಹೆಚ್ಚಳ

ಬೆಂಗಳೂರು: ನಂದಿನಿ ಹಾಲಿನ ದರ ಲೀಟರ್‌ ಒಂದಕ್ಕೆ 3 ರೂ. ಹೆಚ್ಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಒಪ್ಪಿಗೆ ನೀಡಿದ್ದಾರೆ. ರಾಜ್ಯದ ಎಲ್ಲಾ ಹಾಲು ಒಕ್ಕೂಟಗಳು ಮತ್ತು ಕೆಎಂಎಫ್‌ ಅಧ್ಯಕ್ಷರ ಸಭೆಯ ಬಳಿಕ ಕೆಎಂಎಫ್‌ ನಿರ್ದೇಶಕ ಎಚ್‌.ಡಿ.ರೇವಣ್ಣ ಸುದ್ದಿಗಾರರಿಗೆ ಈ ವಿಷಯ ತಿಳಿಸಿದರು. ಈ ನಿರ್ಣಯ ಆಗಸ್ಟ್‌ 1ರಿಂದ ಜಾರಿಗೆ ಬರಲಿದೆ.

ಆದರೆ 3 ರೂ. ಹೆಚ್ಚಳಕ್ಕೆ ಸಿಎಂ ಒಪ್ಪಿಗೆ ಸೂಚಿಸಿದ್ದಾರೆ. ಹೆಚ್ಚಳವಾದ 3 ರೂಪಾಯಿ ಹಾಲು ಉತ್ಪಾದಕರಿಗೆ ಹೋಗಬೇಕು ಎಂದು ಸಿಎಂ ಸೂಚಿಸಿದ್ದಾರೆ ಎಂದು ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್ ಹೇಳಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ರಾಜ್ಯದಲ್ಲಿನ ಎಲ್ಲ ಹಾಲು ಒಕ್ಕೂಟಗಳು ಹಾಗೂ ಕೆಎಂಎಫ್‌ ಅಧ್ಯಕ್ಷರ ಸಭೆ ನಡೆಸಿದರು.

ಕೆಎಂಎಫ್‌ ಅಧ್ಯಕ್ಷ ಭೀಮಾ ನಾಯ್ಕ, ಸಹಕಾರ ಸಚಿವ ಕೆ.ಎನ್. ರಾಜಣ್ಣ, ಪಶುಸಂಗೋಪನಾ ಸಚಿವ ಕೆ.ವೆಂಕಟೇಶ್‌ ಸಹಕಾರ ಇಲಾಖೆ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್‌ ಪ್ರಸಾದ್‌, ಪಶುಸಂಗೋಪನಾ ಇಲಾಖೆ ಕಾರ್ಯದರ್ಶಿ ಸಲ್ಮಾ ಫಾಹಿಂ, ಕೆಎಂಎಫ್‌ ವ್ಯವಸ್ಥಾಪಕ ನಿರ್ದೇಶಕ ಜಗದೀಶ್‌, ಕೆಎಂಎಫ್ ನಿರ್ದೇಶಕ ಹೆಚ್.ಡಿ.ರೇವಣ್ಣ, ಸಭೆಯಲ್ಲಿ ಭಾಗವಹಿಸಿದ್ದರು.

ಹಾಲಿನ ದರ ಏರಿಕೆಯಾಗುತ್ತಿರುವ ಬೆನ್ನಲ್ಲೇ ಜನತೆಯಲ್ಲಿ ಆತಂಕ ಹೆಚ್ಚಾಗಿದ್ದು, ಈಗಾಗಲೇ ದರ ಸಮರದಿಂದ ಕಂಗಾಲಾಗಿರುವ ಜನತೆಗೆ ಹಾಲಿನ ಬಿಸಿ ತಟ್ಟಲಿದೆ.

Check Also

ಜುಲೈ.23ರಂದು 2024-25ನೇ ಸಾಲಿನ ‘ಕೇಂದ್ರ ಬಜೆಟ್’ ಮಂಡನೆ

ನವದೆಹಲಿ: 2024-25ನೇ ಸಾಲಿನ ಕೇಂದ್ರ ಬಜೆಟ್ ( Union Budget ) ಜುಲೈ 23 ರಂದು ಲೋಕಸಭೆಯಲ್ಲಿ ಮಂಡನೆಯಾಗಲಿದೆ. ಸಂಸತ್ತಿನ …

Leave a Reply

Your email address will not be published. Required fields are marked *

You cannot copy content of this page.