ಉಡುಪಿ: ಮಾನವ ಕಳ್ಳ ಸಾಗಾಣಿಕೆ ಬಗ್ಗೆ ನಿಗಾ – ಕರಾವಳಿ ಕಾವಲು ಪಡೆ ಎಸ್ಪಿ ಅಬ್ದುಲ್ ಅಹದ್

ಉಡುಪಿ: ಮೀನುಗಾರರ ಉತ್ತಮ ಸಹಕಾರದಿಂದ ಸಮುದ್ರದ ಮಧ್ಯೆ ಉದ್ಭವಿಸಿರುವ ಅನೇಕ ಸಮಸ್ಯೆಗಳನ್ನು ನಿವಾರಿಸಲು ಸಾಧ್ಯವಾಗಿದೆ.ಈತನಕ ಮಾನವ ಕಳ್ಳ ಸಾಗಾಣಿಕೆ ಬಗ್ಗೆ ಕರಾವಳಿಯಲ್ಲಿ ಯಾವುದೇ ಪ್ರಕರಣ ದಾಖಲಾಗಿಲ್ಲ.ಆದರೂ ಆ ಬಗ್ಗೆ ನಿಗಾ ಇರಿಸಲಾಗಿದೆ ಎಂದು ಕರಾವಳಿ ಕಾವಲು ಪಡೆಯ ಪೊಲೀಸ್ ಅಧೀಕ್ಷಕ ಅಬ್ದುಲ್ ಅಹದ್ ಹೇಳಿದ್ದಾರೆ. ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ರಜತೋತ್ಸವ ಸಮಿತಿ ಆಶ್ರಯದಲ್ಲಿ ಪತ್ರಕರ್ತರೊಂದಿಗೆ ಹಮ್ಮಿಕೊಂಡ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಕರಾವಳಿ ಪೊಲೀಸ್ ಪಡೆಯಲ್ಲಿ ಟೀಂ ವರ್ಕ್ ಮೂಲಕ ಕೆಲಸ ಮಾಡುತ್ತಿದ್ದು ನಮ್ಮ ಎಲ್ಲ ಸಿಬ್ಬಂದಿ ಮತ್ತು ಮೀನುಗಾರರ ಜೊತೆ ಉತ್ತಮ ಬಾಂಧವ್ಯ ಹೊಂದಿರುವ ಕಾರಣ ಅನೇಕ ಸಂದರ್ಭಗಳಲ್ಲಿ ಅನೇಕ ಸಮಸ್ಯೆಗಳನ್ನು ನಿವಾರಿಸಲು ಸಾಧ್ಯವಾಗಿದೆ ಎಂದರು. ಪತ್ರಕರ್ತರ ಸಂಘದ ಅಧ್ಯಕ್ಷ ರಾಜೆಶ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ನಜೀರ್ ಪೊಲ್ಯ, ಪತ್ರಿಕಾ ಭನವ ನಿರ್ವಹಣಾ ಸಮಿತಿ ಸಂಚಾಲಕ ಅಜಿತ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

Check Also

ಉಡುಪಿ: ಗೋಕಳ್ಳತನ ನಡೆಸಿದ್ದ ಇಬ್ಬರು ಆರೋಪಿಗಳ ಬಂಧನ..!

ಕುಂದಾಪುರ: ಜೂನ್ 25ರಂದು ರಾತ್ರಿ ಶಂಕರನಾರಾಯಣ ಪೇಟೆಯಲ್ಲಿ ನಡೆದ ಗೋ ಕಳ್ಳತನಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಶಂಕರನಾರಾಯಣ ಪೋಲಿಸರು ಬಂಧಿಸಿದ್ದಾರೆ. …

Leave a Reply

Your email address will not be published. Required fields are marked *

You cannot copy content of this page.