
ನವದೆಹಲಿ: ಮತದಾರರ ಪಟ್ಟಿಯನ್ನು ಅಂತಿಮಗೊಳಿಸುವ ಪ್ರಕ್ರಿಯೆಯಲ್ಲಿ ಈಗಾಗಲೇ ಸುಮಾರು 66.23 ಕೋಟಿ ಆಧಾರ್ ಕಾರ್ಡ್‌ಗಳನ್ನು ಅಪ್‌ಲೋಡ್ ಮಾಡಲಾಗಿದೆ ಎಂದು ಭಾರತೀಯ ಚುನಾವಣಾ ಆಯೋಗ (ಇಸಿ) ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ.
ಆದ್ರೆ, ಮತದಾರರ ನೋಂದಣಿ (ತಿದ್ದುಪಡಿ) ನಿಯಮಗಳು 2022 ರ ಅಡಿಯಲ್ಲಿ ಆಧಾರ್ ಸಂಖ್ಯೆಯನ್ನು ಸಲ್ಲಿಸುವುದು ಕಡ್ಡಾಯವಲ್ಲ ಎಂದು ಚಂದ್ರಚೂಡ್ ಹೇಳಿದರು.ಭಾರತದ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್, ನ್ಯಾಯಮೂರ್ತಿ ಜೆ ಬಿ ಪರ್ದಿವಾಲಾ ಮತ್ತು ನ್ಯಾಯಮೂರ್ತಿ ಮನೋಜ್ ಮಿಶ್ರಾ ಅವರನ್ನೊಳಗೊಂಡ ಪೀಠವು ಚುನಾವಣಾ ಸಮಿತಿಯ ಸಲ್ಲಿಕೆಗಳನ್ನು ಗಮನಿಸಿತು ಮತ್ತು ಮತದಾರರ ನೋಂದಣಿ (ತಿದ್ದುಪಡಿ) ನಿಯಮಗಳು, 2022 ರ ನಿಯಮ 26 ಬಿ ನಲ್ಲಿ ಸ್ಪಷ್ಟೀಕರಣದ ಬದಲಾವಣೆಗಳನ್ನು ಕೋರಿದ್ದ ಪಿಐಎಲ್ ಅನ್ನು ವಿಲೇವಾರಿ ಮಾಡಿದೆ.
ಮತದಾರರ ನೋಂದಣಿ (ತಿದ್ದುಪಡಿ) ನಿಯಮಗಳು, 2022 ರ ನಿಯಮ 26-ಬಿ ಅಡಿಯಲ್ಲಿ ಆಧಾರ್ ಸಂಖ್ಯೆ ಕಡ್ಡಾಯವಲ್ಲ ಎಂದು ಚುನಾವಣಾ ಸಮಿತಿಯ ವಕೀಲರು ಸಲ್ಲಿಸಿದ ಸಲ್ಲಿಕೆಗಳನ್ನು ಪೀಠವು ಗಮನಿಸಿದ್ದು, ಚುನಾವಣಾ ಆಯೋಗವು ಸೂಕ್ತ ಸ್ಪಷ್ಟೀಕರಣ ನೀಡಲು ಪರಿಶೀಲಿಸುತ್ತಿದೆ.