
ಬೆಂಗಳೂರು: ಜೀವನದಲ್ಲಿ ಜಿಗುಪ್ಸೆಗೊಂಡ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಅಪಾರ್ಟ್ಮೆಂಟ್ನಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬ್ಯಾಟರಾಯನಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ನಾಗರಬಾವಿ ನಿವಾಸಿ ವಿಜಯಲಕ್ಷ್ಮಿ(17) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ.
ಈಕೆ ದ್ವಿತೀಯ ಪಿಯುಸಿ ಕಾಮರ್ಸ್ ವ್ಯಾಸಂಗ ಮಾಡುತ್ತಿದ್ದಳು.
ತಾಯಿ ಜೊತೆ ವಾಸವಾಗಿದ್ದ ವಿಜಯಲಕ್ಷ್ಮೀ ಕಳೆದ ಒಂದು ವಾರದಿಂದ ಯಾರೊಂದಿಗೂ ಅಷ್ಟಾಗಿ ಮಾತನಾಡದೇ ಜೀವನದಲ್ಲಿ ಜಿಗುಪ್ಸೆಗೊಂಡಿದ್ದಳು. ಈ ನಡುವೆ ಧರ್ಮಸ್ಥಳಕ್ಕೆ ಹೋಗಿ ವಿಜಯಲಕ್ಷ್ಮೀ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಾಗ ವೃದ್ಧರೊಬ್ಬರು ಗಮನಿಸಿ ಆಕೆಗೆ ಬುದ್ಧಿವಾದ ಹೇಳಿ ಕಳುಹಿಸಿದ್ದರು.
ಮೊನ್ನೆ ರಾತ್ರಿ ಮೈಸೂರು ರಸ್ತೆಯ ಬಿಎಚ್‌ಇಎಲ್ ಎದುರು ಇರುವ ಅಪಾರ್ಟ್ಮೆಂಟ್ನಲ್ಲಿ ತಮ್ಮ ಪರಿಚಯಸ್ಥರಿದ್ದಾರೆಂದು ಹೇಳಿಕೊಂಡು ಒಳಗೆ ಹೋಗಿ 13ನೇ -ಫ್ಲೋರ್ ನಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದು, ನಿನ್ನ ಬೆಳಗ್ಗೆ ಈ ವಿಷಯ ಬೆಳಕಿಗೆ ಬಂದಿದೆ. ಸುದ್ದಿ ತಿಳಿದು ಬ್ಯಾಟರಾಯನಪುರ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆಗೆ ಒಳಪಡಿಸಿ ನಂತರ ಮೃತದೇಹವನ್ನು ವಾರಸುದಾರರಿಗೆ ಹಸ್ತಾಂತರಿಸಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಈ ಬಗ್ಗೆ ಬ್ಯಾಟರಾಯನಪುರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.