ಮಂಗಳೂರು: ಹಣದಾಸೆಗಾಗಿ ಹಣತೆ ವ್ಯಾಪಾರಿಯ ಹತ್ಯೆ..! ಮೃತದೇಹದ ಅವಶೇಷಗಳು ಪತ್ತೆ-..!

ಮಂಗಳೂರು: ಹಣತೆ ವ್ಯಾಪಾರಕ್ಕಾಗಿ ಮಂಗಳೂರು ನಗರಕ್ಕೆ ಬಂದಿದ್ದ ತಮಿಳುನಾಡಿನ ಸೇಲಂ ನಿವಾಸಿ ಮಾಯವೇಳ್ ಪೆರಿಯಸಾಮಿ (52) ಎಂಬವರನ್ನು ಹಣದಾಸೆಗೆ ಕೊಲೆಗೈದ ಪ್ರಕರಣ ತಡವಾಗಿ ಬಂದಿದ್ದು, ಈ ಸಂಬಂಧ ಆರೋಪಿ ಹೂವಿನ ಹಡಗಲಿ ನಿವಾಸಿ ರವಿ ಯಾನೆ ವಕೀಲ್ ನಾಯ್ಕ್ (42) ಎಂಬಾತನನ್ನು ಬಂದರು ಪೊಲೀಸರು ಬಂಧಿಸಿದ್ದಾರೆ.

ಇದೇ ವೇಳೆ ಕೊಲೆಯಾದ ಮಾಯವೇಳ್ ಪೆರಿಯಸಾಮಿ ಅವರ ಮೃತ ದೇಹದ ಅವಶೇಷಗಳಾದ ತಲೆಬುರುಡೆ, ಮೂಳೆ ಇತ್ಯಾದಿಗಳು ಕೂಳೂರು ಮೈದಾನದ ಬಳಿ ಪತ್ತೆಯಾಗಿವೆ.

ಮಾಯಾವೇಳ್ ಪೆರಿಯಸಾಮಿ ಮತ್ತವರ ಪತ್ನಿ ಅಕ್ಟೋಬರ್‌ 14ರಂದು ಮಂಗಳೂರಿಗೆ ಆಗಮಿಸಿ ಕುದ್ರೋಳಿಯ ಅಳಕೆ ಮಾರ್ಕೆಟ್ ಬಳಿ ಮಣ್ಣಿನ ದೀಪಗಳನ್ನು ಮಾರಾಟ ಮಾಡಿಕೊಂಡಿದ್ದರು. ಆರೋಪಿ ರವಿ ಯಾನೆ ವಕೀಲ್ ನಾಯ್ಕ್ ಮಂಗಳೂರಿನ ಭವಂತಿ ಸ್ಟ್ರೀಟ್‌ನಲ್ಲಿ ಬೀದಿ ಬದಿ ತರಕಾರಿ ಮಾರಾಟ ಮಾಡುತ್ತಿದ್ದು, ದೀಪಾವಳಿಯ ವೇಳೆ ಹಣತೆಯನ್ನೂ ಮಾರಾಟ ಮಾಡುತ್ತಿದ್ದ ಎನ್ನಲಾಗಿದೆ.

ಹಣತೆಯನ್ನು ಮಾಯಾವೇಳ್‌ ಪೆರಿಯಸಾಮಿ ಬಳಿಯೇ ಖರೀದಿಸುತ್ತಿದ್ದ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಮಾಯಾವೇಳ್ ಪೆರಿಯಸಾಮಿ ಹಣತೆಯ ರಖಂ ವ್ಯಾಪಾರಿಯಾದ ಕಾರಣ ಅವರ ಬಳಿ ಸಾಕಷ್ಟು ಹಣವಿರಬಹುದು ಎಂದು ಭಾವಿಸಿದ ಆರೋಪಿ ರವಿ ನಗರದ ವೈನ್‌ಶಾಪ್‌ನಲ್ಲಿ ಮದ್ಯ ಸೇವಿಸಿ 200 ದೀಪ ಬೇಕಾಗಿದೆ ಎಂದು ನಂಬಿಸಿಕೊಂಡು ಕೂಳೂರಿನ ಮೈದಾನಕ್ಕೆ ಕರೆದುಕೊಂಡು ಹೋಗಿದ್ದ. ಹಾಗೆ ಮಾಯಾವೇಳ್ ಪೆರಿಯಸಾಮಿಗೆ ಮದ್ಯಪಾನ ಕುಡಿಸಿ ಬಳಿಕ ಆರೋಪಿ ರವಿ ಚಾಕುವಿನಿಂದ ಇರಿದು ಕೊಲೆ ಮಾಡಿದ್ದ ಎನ್ನಲಾಗಿದೆ. ಕೊಲೆಗೈದ ಬಳಿಕ ಆರೋಪಿಗೆ ಹಣತೆ ವ್ಯಾಪಾರಿ ಮಾಯಾವೇಳ್ ಪೆರಿಯಸಾಮಿಯ ಬಳಿ ಸಿಕ್ಕಿದ್ದು ಕೇವಲ 30 ರೂ. ಮಾತ್ರ ಎಂದು ಪೊಲೀಸರ ತನಿಖೆಯಿಂದ ತಿಳಿದು ಬಂದಿದೆ.

ಮಾಯಾವೇಳ್ ಪೆರಿಯಸಾಮಿ ನಾಪತ್ತೆಯಾಗಿರುವ ಬಗ್ಗೆ ಅವರ ಪತ್ನಿ ಬಂದರು ಪೊಲೀಸ್ ಠಾಣೆಗೆ ದೂರು ನೀಡಿದ್ದರು. ರವಿವಾರ ಕೂಳೂರಿನ ಮೈದಾನದ ಬಳಿ ಮಾನವನ ತಲೆಬುರುಡೆ, ಮೂಳೆ ಇತ್ಯಾದಿ ಸಿಕ್ಕಿದ್ದವು.

ಈ ಬಗ್ಗೆ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ತನಿಖೆ ನಡೆಸಿದಾಗ ಇದು ಮಾಯಾವೇಳ್ ಪೆರಿಯಸಾಮಿ ಅವರದ್ದೆಂದು ತಿಳಿದು ಬಂತು.

ಬಂದರು ಪೊಲೀಸ್‌ ಠಾಣೆಯ ಇನ್ಸ್‌ಪೆಕ್ಟರ್ ರಾಘವೇಂದ್ರ ನೇತೃತ್ವದ ತಂಡವು ಆರೋಪಿ ರವಿಯನ್ನು ವಶಕ್ಕೆ ಪಡೆದು ವಿಚಾರಿಸಿದಾಗ ಕೊಲೆ ನಡೆಸಿರುವ ಬಗ್ಗೆ ಬಾಯ್ಬಿಟ್ಟ ಎಂದು ಪೊಲೀಸರು ತಿಳಿಸಿದ್ದಾರೆ.

Check Also

ಗಣಪತಿ ಮೆರವಣಿಗೆಯಲ್ಲಿ ಘರ್ಷಣೆ, ಅಂಗಡಿಗಳಿಗೆ ಬೆಂಕಿ ಹಚ್ಚಿದ ಅನ್ಯಕೋಮಿನ ಯುವಕರು- 144 ಸೆಕ್ಷನ್‌ ಜಾರಿ..!

ಮಂಡ್ಯ: ನಾಗಮಂಗಲ ಪಟ್ಟಣದಲ್ಲಿ ಗಣಪತಿ ಮೂರ್ತಿ ವಿಸರ್ಜನ ಮೆರವಣಿಗೆ ವೇಳೆ ಬುಧವಾರ ರಾತ್ರಿ ಘರ್ಷಣೆ ನಡೆದಿದೆ. ಘಟನೆಯ ನಂತರ ಕೆಲವು …

Leave a Reply

Your email address will not be published. Required fields are marked *

You cannot copy content of this page.