ಹುಬ್ಬಳ್ಳಿ: ಗದಗ ಜಿಲ್ಲೆಯ ನರಗುಂದ ತಾಲೂಕಿನ ಹದ್ಲಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಅತಿಥಿ ಶಿಕ್ಷಕ ನಡೆಸಿದ ಅಮಾನವೀಯ ದಾಳಿಯಿಂದ ಗಂಭೀರವಾಗಿ ಗಾಯಗೊಂಡು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆತ್ತಿದ್ದ ಅತಿಥಿ ಶಿಕ್ಷಕಿ ಗೀತಾ ಯಲ್ಲಪ್ಪ ಚಿಕಿತ್ಸೆ ಫಲಕಾರಿಯಾಗದೇ ಇಂದು ಮೃತಪಟ್ಟಿದ್ದಾರೆ.
ಹದ್ಲಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಅತಿಥಿ ಶಿಕ್ಷಕನಾಗಿದ್ದ ಆರೋಪಿ ಮುತ್ತಪ್ಪ ಹಡಗಲಿ, ಶಾಲೆಯ 4ನೇ ತರಗತಿ ವಿದ್ಯಾರ್ಥಿ ಭರತ್ ಮೇಲೆ ಡಿ.19 ರ ಬೆಳಗ್ಗೆ ಹಲ್ಲೆ ನಡೆಸಿ, ಒಂದನೇ ಮಹಡಿಯಿಂದ ಕೆಳಗೆ ತಳ್ಳಿದ್ದ. ಬಳಿಕ ಶಿಕ್ಷಕಿ ಗೀತಾ ಯಲ್ಲಪ್ಪ ಅವರ ಮೇಲೂ ಸಲಾಕೆಯಿಂದ ಹಲ್ಲೆ ನಡೆಸಿದ್ದ. ಗಂಭೀರವಾಗಿ ಗಾಯಗೊಂಡಿದ್ದ ಬಾಲಕ ಭರತ್ ಮೃತಪಟ್ಟಿದ್ದಾನೆ. ಶಿಕ್ಷಕಿ ಗೀತಾ ಅವರಿಗೆ ಸಮೀಪದ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಆದರೆ ಚಿಕಿತ್ಸೆ ಫಲಕಾರಿಯಾಗಿದೇ ಸಾವನ್ನಪ್ಪಿದ್ದಾರೆ.