ನವದೆಹಲಿ : ಇಂದು ನಡೆದ ಪರಾಕ್ರಮ್ ದಿವಸ್(Parakram Diwas) ಸಮಾರಂಭದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಅಂಡಮಾನ್ ಮತ್ತು ನಿಕೋಬಾರ್‌ನ ಹೆಸರಿಸದ 21 ದೊಡ್ಡ ದ್ವೀಪಗಳಿಗೆ ʻಪರಮ ವೀರ ಚಕ್ರʼ ಪ್ರಶಸ್ತಿ ಪುರಸ್ಕೃತ(Param Vir Chakra awardees)ರ ಹೆಸರನ್ನು ಹೆಸರಿಸಿದ್ದಾರೆ.
ಈ ಹಿಂದೆ ರಾಸ್ ಐಲ್ಯಾಂಡ್ಸ್ ಎಂದು ಕರೆಯಲಾಗುತ್ತಿದ್ದ ನೇತಾಜಿ ಸುಭಾಷ್ ಚಂದ್ರ ಬೋಸ್ ದ್ವೀಪದಲ್ಲಿ ನಿರ್ಮಿಸಲಾಗಿದ್ದ ನೇತಾಜಿಗೆ ಮೀಸಲಾಗಿರುವ ರಾಷ್ಟ್ರೀಯ ಸ್ಮಾರಕದ ಮಾದರಿಯನ್ನು ಪ್ರಧಾನಿ ಮೋದಿ ಅನಾವರಣಗೊಳಿಸಿದರು. ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ನಡೆದ ಸಮಾರಂಭದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡ ಉಪಸ್ಥಿತರಿದ್ದರು.
ಶ್ರೀನಗರ ವಿಮಾನ ನಿಲ್ದಾಣದ ಬಳಿ ಪಾಕಿಸ್ತಾನಿ ನುಸುಳುಕೋರರನ್ನು ಹಿಮ್ಮೆಟ್ಟಿಸುವಾಗ ನವೆಂಬರ್ 3, 1947 ರಂದು ಕಾರ್ಯಾಚರಣೆಯಲ್ಲಿ ಪ್ರಾಣ ಕಳೆದುಕೊಂಡ ಮೊದಲ ಪರಮ ವೀರ ಚಕ್ರ ಪ್ರಶಸ್ತಿ ಪುರಸ್ಕೃತ ಮೇಜರ್ ಸೋಮನಾಥ್ ಶರ್ಮಾ ಅವರ ಹೆಸರನ್ನು ಹೆಸರಿಸದ ಅತಿದೊಡ್ಡ ದ್ವೀಪಕ್ಕೆ ಹೆಸರಿಸಲಾಯಿತು.