ಬೆಂಗಳೂರು : ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಬಿಜೆಪಿ ಎಂಎಲ್ಸಿ ಸಿಟಿ ರವಿ ಅವರು ಅಶ್ಲೀಲ ಪದ ಬಳಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಹೈಕೋರ್ಟ್ ಸಿಟಿ ರವಿ ಅವರಿಗೆ ಬಿಗ್ ರಿಲೀಫ್ ನೀಡಿದ್ದು ಫೆಬ್ರವರಿ 30ರವರೆಗೆ ಸಿಟಿ ರವಿ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳದಂತೆ ಆದೇಶ ಹೊರಡಿಸಿದೆ.
ಹೌದು ಇಂದು ಹೈಕೋರ್ಟ್ ನಲ್ಲಿ ಈ ಪ್ರಕರಣದ ವಿಚಾರವಾಗಿ ವಾದ ಪ್ರತಿವಾದ ನಡೆಯಿತು. ವಿಧಾನಪರಿಷತ್ತಿನಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅವಾಚ್ಯ ಶಬ್ದಗಳಿಂದ ನಿಂದಿಸಿದ ಆರೋಪದಲ್ಲಿ ಬಿಜೆಪಿ ಎಂಎಲ್ಸಿ ಸಿಟಿ ರವಿಗೆ ಕರ್ನಾಟಕ ಹೈಕೋರ್ಟ್ ಇಂದು ಬಿಗ್ ರಿಲೀಫ್ ನೀಡಿದೆ. ಸಿಟಿ ರವಿ ವಿರುದ್ಧ ಫೆಬ್ರವರಿ 30 ರವರೆಗೆ ಬಲವಂತದ ಕ್ರಮ ಕೈಗೊಳ್ಳದಂತೆ ಹೈಕೋರ್ಟ್ ಸೂಚಿಸಿದೆ.
ಸಿಟಿ ರವಿ ಪರವಾಗಿ ಹಿರಿಯ ವಕೀಲ ಸಿವಿ ನಾಗೇಶ್ ವಾದ ಮಂಡಿಸಿದರು. ಇದಕ್ಕೆ ಪ್ರತಿಯಾಗಿ ಕ್ರಿಮಿನಲ್ ಕೃತ್ಯಗಳಿಗೆ ವಿನಾಯಿತಿ ಇಲ್ಲವೆಂದು ಎಸ್ಪಿಪಿ ಬಿಎ ಬೆಳ್ಳಿಯಪ್ಪ ವಾದ ಮಂಡಿಸಿದರು. ತನಿಖೆ ವ್ಯಾಪ್ತಿಯ ಪ್ರಶ್ನೆಯನ್ನು ನಾವು ತೀರ್ಮಾನಿಸಬೇಕಿದೆ ಎಂದ ಹೈಕೋರ್ಟ್, ಬಲವಂತದ ಕ್ರಮ ಕೈಗೊಳ್ಳದಂತೆ ಆದೇಶ ನೀಡಿದೆ.