

ಮೂಡುಬಿದಿರೆ : ಭಾರೀ ಮಳೆ ಬಿರುಗಾಳಿಯಿಂದಾಗಿ ಮೂಡುಬಿದಿರೆ -ಬಂಟ್ವಾಳ ರಾಜ್ಯ ಹೆದ್ದಾರಿ ಹಾದು ಹೋಗುವ ಬಿರಾವು ಗಾಜಿಗಾರ ಪಲ್ಕೆಯಲ್ಲಿ ಚಲಿಸುತ್ತಿದ್ದ ಕಾರೊಂದರ ಮೇಲೆ ಮರ ಮುರಿದುಬಿದ್ದು ಕಾರು ಜಖಂಗೊಂಡಿದೆ.
ಮೂಡುಬಿದಿರೆ ಮಾರೂರು ಭಾಗದಲ್ಲಿ ಭಾರೀ ಗಾಳಿ ಸಹಿತ ಮಳೆಯಾಗಿದ್ದು, ಮರಗಳು, ವಿದ್ಯುತ್ ತಂತಿಗಳು ಧರೆಗೆ ಉರುಳಿವೆ. ಮನೆ, ಕಾರು ಜಖಂಗೊಂಡಿರುವ ಘಟನೆ ಮಂಗಳವಾರ ವರದಿಯಾಗಿದೆ. ಘಟನೆಯಿಂದ ಕಾರಿನಲ್ಲಿ ಪ್ರಯಾಣಿಸುತ್ತಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಕೆಲಕಾಲ ಬೀಸಿದ ಗಾಳಿಗೆ ಹಲವು ಮರಗಳು ವಿದ್ಯುತ್ ತಂತಿಗಳ ಮೇಲೆ ಬಿದ್ದು ಕಂಬಗಳು ನೆಲಕ್ಕಪ್ಪಳಿಸಿದ್ದು ಮಾರ್ಗದಲ್ಲಿ ವಾಹನ ಸಂಚಾರಕ್ಕೆ ತಡೆಯುಂಟಾಗಿತ್ತು. ಅರಣ್ಯ ಇಲಾಖೆ, ಮೆಸ್ಕಾಂ ಹಾಗೂ ಪೊಲೀಸರು ಮರಗಳನ್ನು ತೆರವುಗೊಳಿಸಿ ವಾಹನ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟರು. ವೇಣೂರು ಮಾರ್ಗದಲ್ಲಿ ಮಾರೂರು ಶಾಲೆಯ ಬಳಿ ರಜಾಕ್ ಅವರ ಮನೆ ಮೇಲೆ ಮರ ಉರುಳಿ ಬಿದ್ದು ಮನೆಗೆ ತೀವ್ರ ಹಾನಿಯುಂಟಾಗಿದೆ.
ಕೆಲಕಾಲ ಬೀಸಿದ ಗಾಳಿಗೆ ಹಲವು ಮರಗಳು ವಿದ್ಯುತ್ ತಂತಿಗಳ ಮೇಲೆ ಬಿದ್ದು ಕಂಬಗಳು ನೆಲಕ್ಕಪ್ಪಳಿಸಿದ್ದು ಮಾರ್ಗದಲ್ಲಿ ವಾಹನ ಸಂಚಾರಕ್ಕೆ ತಡೆಯುಂಟಾಗಿತ್ತು. ಅರಣ್ಯ ಇಲಾಖೆ, ಮೆಸ್ಕಾಂ ಹಾಗೂ ಪೊಲೀಸರು ಮರಗಳನ್ನು ತೆರವುಗೊಳಿಸಿ ವಾಹನ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟರು.