March 14, 2026
WhatsApp Image 2023-07-23 at 2.10.39 PM

ಉಳ್ಳಾಲ: ಉಳ್ಳಾಲ ಠಾಣಾ ವ್ಯಾಪ್ತಿಯ ತೊಕ್ಕೊಟ್ಟು ಒಳಪೇಟೆಯ ಬಳಿ ಖಾಸಗಿ ಜಾಗದಲ್ಲಿ ಮಟ್ಕಾ ಅಡ್ಡೆಗೆ ದಾಳಿ ನಡೆಸಿದ ಉಳ್ಳಾಲ ಠಾಣಾ ಪೊಲೀಸರು ಐವರನ್ನು ಬಂಧಿಸಿದ್ದಾರೆ.

ಬಂಧಿತರನ್ನು ಲ್ಯಾನ್ಸಿ ವೇಗಸ್, ನವಾಝ್ , ಸತೀಶ್ ಗಟ್ಟಿ, ನಾಸೀರ್ ಮತ್ತು ಮಧು ಯಾನೆ ಮನು ಎಂದು ಗುರುತಿಸಲಾಗಿದೆ.

ಆರೋಪಿಗಳನ್ನು ವಶಕ್ಕೆ ಪಡೆದು ಅವರಿಂದ  7040ರೂ. ನಗದು, ಐದು ಮೊಬೈಲ್ ಹಾಗೂ ಜೂಜಾಟ ಕ್ಕೆ ಬಳಸಿದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಉಳ್ಳಾಲ ದಲ್ಲಿ ಮಟ್ಕಾ ನಡೆಯುತ್ತಿದೆ ಎಂಬ ಖಚಿತ ಮಾಹಿತಿ ಪಡೆದ ಪೊಲೀಸ್ ಆಯುಕ್ತ ಕುಲದೀಪ್ ಜೈನ್ ಅವರ ನಿರ್ದೇಶನದಂತೆ, ಉಳ್ಳಾಲ ಇನ್ಸ್ ಪೆಕ್ಟರ್  ಸಂದೀಪ್ ರವರ ಮಾರ್ಗದರ್ಶನದಲ್ಲಿ ಉಪನಿರ್ದೇಶಕ ಸಂತೋಷ್ ಕುಮಾರ್ ಸಿಬ್ಬಂದಿ ಆನಂದ, ಪಿ.ಸಿ.ಆಶೋಕ್ ಮತ್ತು ರಿಯಾಝ್ ರವರು ಸೂಕ್ತ ಕಾರ್ಯಾಚರಣೆ ನಡೆಸುವ ಮೂಲಕ ಈ ಪ್ರಕರಣವನ್ನು ಭೇದಿಸಿದ್ದಾರೆ.

About The Author

Leave a Reply

Your email address will not be published. Required fields are marked *

You cannot copy content of this page.