
ಉಡುಪಿ: ಉಡುಪಿ ಕಟಪಾಡಿಯಲ್ಲಿ ಶನಿವಾರ ಸಂಜೆ ಸುರಿದ ಭಾರೀ ಮಳೆಗೆ ವಾರದ ಸಂತೆ ನಡಿತಾ ಇದ್ದ ಸ್ಥಳದಲ್ಲಿದ್ದ ಬೃಹತ್ ಗಾತ್ರ ಮರವೊಂದು ಉರುಳಿ ಬಿದ್ದ ಘಟನೆ ನಡೆದಿದೆ.
ಮರ ಬಿದ್ದ ರಭಸಕ್ಕೆ ಮರದಡಿ ಇದ್ದ ಹಲವು ವಾಹನಗಳು ಜಖಂಗೊಂಡಿವೆ. ಆದರೆ ಘಟನೆಯಲ್ಲಿ ಯಾವುದೇ ರೀತಿಯ ಪ್ರಾಣ ಹಾನಿ ಸಂಭವಿಸಿಲ್ಲ.
ಇದರಿಂದಾಗಿ ಕೆಲ ಹೊತ್ತು ವಾಹನಗಳ ಸಂಚಾರ ಅಸ್ತವ್ಯಸ್ತಗೊಂಡಿತು. ಬಳಿಕ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕದಳದ ಸಿಬ್ಬಂದಿ ಹಾಗೂ ಕಾಪು ಠಾಣೆಯ ಪೊಲೀಸರು ಸ್ಥಳೀಯರ ಸಹಕಾರದೊಂದಿಗೆ ಮರ ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟರು.
