

ಬಂಟ್ವಾಳ: ಭಾರೀ ಮಳೆಗೆ ಮುಳುಗಿದ ಸೇತುವೆಯಲ್ಲಿ ಪಿಕಪ್ ವಾಹನ ಸಿಲುಕಿದ ಘಟನೆ ದ.ಕ ಜಿಲ್ಲೆಯ ಬಂಟ್ವಾಳ ತಾಲೂಕಿನ ಕೆದಿಲದಲ್ಲಿ ನಡೆದಿದೆ. ಕೆದಿಲ ಕಾಂತುಕೋಡಿ ಮುಳುಗು ಸೇತುವೆಯಲ್ಲಿ ಪಿಕಪ್ ವಾಹನ ಸಿಲುಕಿಕೊಂಡಿದ್ದು, ಸ್ಥಳೀಯರಿಂದ ವಾಹನದಲ್ಲಿದ್ದವರ ರಕ್ಷಣಾ ಕಾರ್ಯ ನಡೆಯಿತು. ಸೇತುವೆ ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಸಂಪೂರ್ಣ ಮುಳುಗಡೆಯಾಗಿತ್ತು. ನೀರಿನ ಮಟ್ಟ ಏರಿಕೆಯಾಗಿದ್ದರೂ ಪಿಕಪ್ ಚಾಲಕರೋರ್ವರು ತಮ್ಮ ವಾಹನವನ್ನು ಚಲಾಯಿಸಿಕೊಂಡು ಬಂದಿದ್ದರು. ಆದರೆ ನೀರು ಹೆಚ್ಚಾಗಿ ಸೇತುವೆಯ ಮಧ್ಯದಲ್ಲಿ ಸಿಲುಕಿಕೊಂಡಿದೆ. ತಕ್ಷಣ ಸ್ಥಳೀಯರು ಅದರೊಳಗಡೆ ಸಿಲುಕಿದವವರನ್ನು ರಕ್ಷಣೆ ಮಾಡಿದ್ದಾರೆ. ಪ್ರತೀ ವರ್ಷ ಮಳೆ ಬಂದಾಗ ಈ ಸೇತುವೆ ಮುಳುಗಡೆಯಾಗುತ್ತದೆ.