BREAKING NEWS: ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ವಿತ್ತ ಸಚಿವೆ

ವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2024-25ನೇ ಸಾಲಿನ ಬಜೆಟ್ ನಲ್ಲಿ ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟಿದ್ದಾರೆ.

ಮೊದಲ ಬಾರಿ ಉದ್ಯೋಗ ಹುಡುಕುವವರಿಗೆ ದೊಡ್ಡ ಸಹಾಯ ಸಿಗಲಿದೆ. ಔಪಚಾರಿಕ ವಲಯದಲ್ಲಿ ಮೊದಲ ಬಾರಿಗೆ ಉದ್ಯೋಗ ಆರಂಭಿಸುವವರಿಗೆ ಒಂದು ತಿಂಗಳ ವೇತನವನ್ನು ಸರ್ಕಾರದ ವತಿಯಿಂದ ನೀಡಲಾಗುವುದು ಎಂದು ಘೋಷಿಸಿದ್ದಾರೆ.

ಈ ವೇತನವನ್ನು ನೇರ ನಗದು ವರ್ಗಾವಣೆ ಮೂಲಕ ಮೂರು ಕಂತುಗಳಲ್ಲಿ ಬಿಡುಗಡೆ ಮಾಡಲಾಗುವುದು. ಇದರ ಗರಿಷ್ಠ ಮೊತ್ತ 15,000 ರೂ. ಇಪಿಎಫ್ ಒ ನಲ್ಲಿ ನೊಂದಾಯಿಸಲ್ಪಟ್ಟವರು ಈ ಭತ್ಯೆ ಪಡೆಯಲಿದ್ದಾರೆ. ಇದರಿಂದ 2.10 ಕೋಟಿ ಯುವಕರಿಗೆ ಅನುಕೂಲವಾಗಲಿದೆ ಎಂದು ತಿಳಿಸಿದರು.

Check Also

ಬಂಟ್ವಾಳ: ಮದ್ವೆಯಾದ ಎರಡೇ ದಿನಕ್ಕೆ ನವ ವಿವಾಹಿತೆ ಸಾವು, ಪತಿ ಗಂಭೀರ

ಬಂಟ್ವಾಳ: ನವ ದಂಪತಿಗಳಿಬ್ಬರು ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತ ಸಂಭವಿಸಿ ನವವಿವಾಹಿತೆ ಸಾವನ್ನಪ್ಪಿದ್ದು, ಪತಿ ಗಂಭೀರವಾಗಿ ಗಾಯಗೊಂಡ ಘಟನೆ ರಾಷ್ಟ್ರೀಯ …

Leave a Reply

Your email address will not be published. Required fields are marked *

You cannot copy content of this page.