ಉಡುಪಿ: ನೆನೆಗುದಿಗೆ ಬಿದ್ದ ಬಹು ಚರ್ಚಿತ ರೈಲ್ವೆ ಬ್ರಿಡ್ಜ್ ಕಾಮಗಾರಿಯನ್ನು ಇಂದು ಸಂಸದ ಕೋಟ ವೀಕ್ಷಣೆ ನಡೆಸಿದರು. ನಗರದಲ್ಲಿ ಅಪಘಾತ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸೇತುವೆ ಕಾಮಗಾರಿ ಅವ್ಯವಸ್ಥೆ ಬಗ್ಗೆ ವಿವಿಧ ಸಂಘಟನೆಗಳು ಪ್ರತಿಭಟನೆಯ ಎಚ್ಚರಿಕೆ ನೀಡಿದ್ದವು. ಎಚ್ಚರಿಕೆ ಹಿನ್ನೆಲೆಯಲ್ಲಿ ರೈಲ್ವೆ ಬ್ರಿಡ್ಜ್ ಕಾಮಗಾರಿ ವೀಕ್ಷಣೆ ಮಾಡಿದ ಸಂಸದರು ಶೀಘ್ರ ಕಾಮಗಾರಿ ಪೂರ್ಣಗೊಳಿಸುವ ಭರವಸೆ ನೀಡಿದರು.
ಈ ಸೇತುವೆ ಬಗ್ಗೆ ತುಂಬಾ ವಿವಾದಗಳು ನಡೆಯುತ್ತಿವೆ, ಅಪಘಾತಗಳು ಆಗಿವೆ. 2018ರಲ್ಲಿ ಈ ಕಾಮಗಾರಿ ಆರಂಭವಾಗಿದೆ. ರೈಲ್ವೆ ಇಲಾಖೆ ವಿಳಂಬದಿಂದ ತಡವಾಗುತ್ತಿದೆ. 138 ಟನ್ ತೂಕದ ಗರ್ಡರ್ ಅಳವಡಿಸುವ ಯೋಜನೆ ಇದಾಗಿತ್ತು. ರಸ್ತೆ ಉದ್ದ 38 ಮೀಟರ್ ನಿಂದ 58 ಮೀಟರ್ಗೆ ವಿಸ್ತರಣೆಯಾಗಿದೆ. ಗರ್ಡರ್ಗಳಿಗೆ ಅಳವಡಿಸುವ ಸ್ಟೀಲ್ 420 ಟನ್ಗೆ ಏರಿಕೆಯಾಗಿದೆ. ಕಾಮಗಾರಿ ವಿಳಂಬವಾಗಿರುವುದು ಹೌದು. ಜನವರಿ 15 ರೊಳಗೆ ವಾಹನ ಸಂಚಾರಕ್ಕೆ ಅನುಕೂಲ ಮಾಡಲಾಗುವುದು. ಜಿಲ್ಲಾಧಿಕಾರಿಗಳು ಮತ್ತು ಎಸ್ ಪಿ ನಡೆಸಿರುವ ಸಭೆಯಲ್ಲಿ ಈ ಬಗ್ಗೆ ತೀರ್ಮಾನವಾಗಿದೆ ಎಂದು ಹೇಳಿದರು.