ಸುಬ್ರಹ್ಮಣ್ಯ: ನನ್ನನ್ನು ಯಾರೂ ಅಪಹರಿಸಿಲ್ಲ, ಪ್ರೀತಿಸಿದವರೊಂದಿಗೆ ನಾನೇ ಸ್ವಇಚ್ಛೆಯಿಂದ ಹೋಗಿದ್ದೇನೆ ಎಂದು ಸುಬ್ರಹ್ಮಣ್ಯದಿಂದ ನಾಪತ್ತೆಯಾಗಿದ್ದ ಗ್ರಾಮ ಪಂಚಾಯಿತಿ ಸದಸ್ಯೆ ಭಾರತಿ ಹೇಳಿರುವ ವೀಡಿಯೊ ಇದೀಗ ವೈರಲ್ ಆಗುತ್ತಿದೆ.
ನಾನಾಗಿಯೇ ಬಂದಿದ್ದೇನೆ, ನನ್ನನ್ನು ಯಾರೂ ಅಪಹರಿಸಿಲ್ಲ. ನಾನು ಒಬ್ಬರನ್ನು ಮನೆಯ ಹತ್ತಿರ ಬರಲು ಹೇಳಿದ್ದೆ. ಅವರು ಬಂದು ನನ್ನನ್ನು ಕರೆದುಕೊಂಡು ಹೋದ್ರು. ನಾವು ಕಳೆದ 5 ವರ್ಷಗಳಿಂದ ಲವ್ ಮಾಡ್ತಾ ಇದ್ದೇವೆ. ಈಗಲೂ ಮಾಡ್ತಾ ಇದ್ದೇವೆ. ಮದುವೆಗೆ ಮುಂಚೆನೂ ಲವ್ ಮಾಡ್ತಿದ್ದೆ.
ಇದರಿಂದಾಗಿ ಯಾರಿಗೂ ತೊಂದರೆ ಕೊಡಬೇಡಿ. ಯಾರ ಹತ್ತಿರವೂ ಕೇಳುವುದೂ ಬೇಡ. ನಮಗೆ ತೊಂದರೆ ಕೊಡಬೇಡಿ. ಹಾಗೇನಾದ್ರೂ ಮಾಡಿದ್ರೆ ನಾವಿಬ್ಬರೂ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ. ನನ್ನನ್ನು ಯಾರೂ ಕಿಡ್ನಾಪ್ ಮಾಡಿಲ್ಲ. ನಾನು ಖುಷಿಯಾಗಿಯೇ ಇದ್ದೇನೆ. ಆಮೇಲೆ ಏನಾದ್ರೂ ಆದರೆ ನೀವೇ ಜವಾಬ್ದಾರರು ಎಂದು ಭಾರತಿ ವೀಡಿಯೊದಲ್ಲಿ ಹೇಳಿಕೊಂಡಿದ್ದಾರೆ. ಸದ್ಯ, ಈ ವೀಡಿಯೊ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.