ಯುವತಿಯನ್ನು ನಡು ರಸ್ತೆಯಲ್ಲಿ ಚಾಕುವಿನಿಂದ ಇರಿದು ತಾನೂ ವಿಷ ಸೇವಿಸಿ ಆಸ್ಪತ್ರೆ ಸೇರಿದ್ದ ಯುವಕ ಸಾವು

ದಾವಣಗೆರೆ: ಪ್ರೀತಿ ನಿರಾಕರಿಸಿದ್ದ ಯುವತಿಯನ್ನು ಹಾಡಹಗಲೇ ನಡು ರಸ್ತೆಯಲ್ಲಿ ಚಾಕುವಿನಿಂದ ಇರಿದು ಕೊಲೆ  ಮಾಡಿದ್ದ ಯುವಕ ಬಳಿಕ ತಾನೂ ವಿಷ ಸೇವಿಸಿ ಆತ್ಮಹತ್ಯೆಗೆ  ಯತ್ನಿಸಿದ್ದ ಘಟನೆ ಗುರುವಾರ ಬೆಣ್ಣೆ ನಗರಿ ದಾವಣಗೆರೆಯಲ್ಲಿ ನಡೆದಿತ್ತು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೇ ಯುವಕನೂ ಮೃತಪಟ್ಟಿದ್ದಾನೆ.

ಯುವತಿಯನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಯುವಕ ಸಾದತ್ ಅಲಿಯಾಸ್ ಚಂದ್ ಪೀರ್ (29) ಎಂದು ಗುರುತಿಸಲಾಗಿದೆ. ಗುರುವಾರ ದಾವಣಗೆರೆ ನಗರದ ಪಿಜೆ ಬಡಾವಣೆ ಚರ್ಚ್ ಬಳಿ ಆತ ಯುವತಿ ಚಾಂದ್ ಸುಲ್ತಾನಳನ್ನು ಚಾಕುವಿನಿಂದ ಚುಚ್ಚಿ ಹತ್ಯೆ ಮಾಡಿದ್ದ. ಬಳಿಕ ತಾನೂ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ.

ವಿಚಾರ ತಿಳಿದ ಪೊಲೀಸರು ಸ್ಥಳಕ್ಕಾಗಮಿಸಿ ಯುವಕನನ್ನು ದಾವಣಗೆರೆ ಸಿಟಿ ಸೆಂಟ್ರಲ್ ಆಸ್ಪತ್ರೆಗೆ ದಾಖಲು ಮಾಡಿದ್ದರು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೇ ಸಾದತ್ ಸಾವನ್ನಪ್ಪಿದ್ದಾನೆ
ವರದಿಗಳ ಪ್ರಕಾರ ಸಾದತ್ ಚಾಂದ್ ಸುಲ್ತಾನಾಳನ್ನು ಪ್ರೀತಿಸುತ್ತಿದ್ದು, ಆಕೆಯನ್ನು ಮದುವೆಯಾಗಲು ಬಯಸಿದ್ದ. ಆದರೆ ಆಕೆ ಆತನ ಪ್ರೀತಿಯನ್ನು ನಿರಾಕರಿಸಿದ್ದು ಮಾತ್ರವಲ್ಲದೇ ಆಕೆಯ ಕುಟುಂಬದ ಸದಸ್ಯರು ಆಕೆಗೆ ಮತ್ತೊಂದು ಹುಡುಗನೊಂದಿಗೆ ನಿಶ್ಚಿತಾರ್ಥ ಮಾಡಿದ್ದರು. ಇದರಿಂದ ಸಾದತ್ ಕೋಪಗೊಂಡಿದ್ದ.
ನಿನ್ನೆ ಸುಲ್ತಾನಾ ತನ್ನ ಪಾಡಿಗೆ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದಾಗ ಸಾದತ್ ಆಕೆಯನ್ನು ಮಾತನಾಡಬೇಕು ಎಂದು ನಡು ರಸ್ತೆಯಲ್ಲಿ ನಿಲ್ಲಿಸಿದ್ದ. ಈ ವೇಳೆ ಆಕೆಗೆ ಚಾಕುವಿನಿಂದ ಚುಚ್ಚಿ ಹತ್ಯೆ ಮಾಡಿದ್ದಾನೆ. ಕೊಲೆಯ ಭೀಕರ ದೃಶ್ಯಗಳನ್ನು ಕಂಡು ದಾವಣಗೆರೆ ಜನರು ಬೆಚ್ಚಿ ಬಿದ್ದಿದ್ದಾರೆ.

Check Also

ಗಣಪತಿ ಮೆರವಣಿಗೆಯಲ್ಲಿ ಘರ್ಷಣೆ, ಅಂಗಡಿಗಳಿಗೆ ಬೆಂಕಿ ಹಚ್ಚಿದ ಅನ್ಯಕೋಮಿನ ಯುವಕರು- 144 ಸೆಕ್ಷನ್‌ ಜಾರಿ..!

ಮಂಡ್ಯ: ನಾಗಮಂಗಲ ಪಟ್ಟಣದಲ್ಲಿ ಗಣಪತಿ ಮೂರ್ತಿ ವಿಸರ್ಜನ ಮೆರವಣಿಗೆ ವೇಳೆ ಬುಧವಾರ ರಾತ್ರಿ ಘರ್ಷಣೆ ನಡೆದಿದೆ. ಘಟನೆಯ ನಂತರ ಕೆಲವು …

Leave a Reply

Your email address will not be published. Required fields are marked *

You cannot copy content of this page.