ರಾಜ್ಯದಲ್ಲಿ ಸದ್ಯಕ್ಕೆ ‘ಮಾಸ್ಕ್’ ಕಡ್ಡಾಯ ಇಲ್ಲ, ಆದರೆ ಜಾಗೃತಿ ವಹಿಸಿ : ಸಚಿವ ಸುಧಾಕರ್

ಬೆಳಗಾವಿ : ಚೀನಾ ದೇಶದಲ್ಲಿ ಕೊರೊನಾ ಸೋಂಕು ಹೆಚ್ಚಳವಾಗುತ್ತಿದ್ದಂತೆ ಕರ್ನಾಟಕದಲ್ಲೂ ಕಟ್ಟೆಚ್ಚರ ವಹಿಸಲಾಗಿದೆ.

ಈ ಕುರಿತು ಸುದ್ದಿಗಾರರ ಜೊತೆ ಮಾತನಾಡಿದ ಸಚಿವರು ರಾಜ್ಯದಲ್ಲಿ ಮಾಸ್ಕ್ ಕಡ್ಡಾಯಗೊಳಿಸುವ ಕುರಿತು ಆರೋಗ್ಯ ಸಚಿವ ಸುಧಾಕರ್ ಪ್ರತಿಕ್ರಿಯೆ ನೀಡಿದ್ದು, ಮಾಸ್ಕ್ ಕಡ್ಡಾಯಗೊಳಿಸುವ ಪರಿಸ್ಥಿತಿ ಬಂದರೆ ಖಂಡಿತ ಮಾಡುತ್ತೇವೆ, ಸದ್ಯಕ್ಕೆ ಮಾಸ್ಕ್ ಕಡ್ಡಾಯವಿಲ್ಲ, ಪರಿಸ್ಥಿತಿ ನೋಡಿಕೊಂಡು ಮಾಸ್ಕ್ ಕಡ್ಡಾಯ ಮಾಡುವ ಬಗ್ಗೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ.

ಜನರು ಇದಕ್ಕೆ ಅವಕಾಶ ಕೊಡಬಾರದು, ಕಡ್ಡಾಯವಾಗಿ ಕೊರೊನಾ ಮಾರ್ಗಸೂಚಿ ಪಾಲನೆ ಮಾಡಬೇಕು ಎಂದು ಹೇಳಿದ್ದಾರೆ.

ಕೊರೊನಾ ಮಾರ್ಗಸೂಚಿ ಪಾಲಿಸದಿದ್ದರೆ ಬೆಂಗಳೂರಿನಲ್ಲಿ ‘ಕಠಿಣ ನಿಯಮ’ ಜಾರಿಗೆ ತರಲಾಗುತ್ತದೆ ಎಂದು ಆರೋಗ್ಯ ಸಚಿವ ಸುಧಾಕರ್ ಎಚ್ಚರಿಕೆ ನೀಡಿದ್ದಾರೆ.ಬೆಂಗಳೂರಿನಲ್ಲಿ ಜನರು ಸರಿಯಾಗಿ ಕೊರೊನಾ ಮಾರ್ಗಸೂಚಿ ಪಾಲನೆ ಮಾಡಬೇಕು, ಇಲ್ಲವಾದಲ್ಲಿ ಕಠಿಣ ನಿಯಮಗಳನ್ನು ಜಾರಿಗೆ ತರಬೇಕಾಗುತ್ತದೆ, ಮಾಸ್ಕ್ ಕಡ್ಡಾಯವಾಗಿ ಧರಿಸಿ ಕೊರೊನಾ ಮಾರ್ಗಸೂಚಿ ಪಾಲನೆ ಮಾಡಿ ಎಂದು ಸೂಚನೆ ನೀಡಿದರು.ಬೇರೆ ದೇಶಗಳಲ್ಲಿ ಕೋವಿಡ್ ಪ್ರಕರಣ ಹೆಚ್ಚಳ ಹಾಗೂ ಹೊಸ ರೂಪಾಂತರಿ ವೈರಾಣು ಕಂಡುಬಂದ ಹಿನ್ನೆಲೆಯಲ್ಲಿ, ರಾಜ್ಯದಲ್ಲಿ ಐಎಲ್‌ಐ ಮತ್ತು ಸಾರಿ ಸಮಸ್ಯೆ ಇರುವವರಿಗೆ ಕಡ್ಡಾಯವಾಗಿ ಕೊರೊನಾ ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.

ಇನ್ನೂ, ನಿನ್ನೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ, ಕೋವಿಡ್ ನಿರ್ವಹಣೆ ಕುರಿತು ಸಭೆ ನಡೆದ ಬಳಿಕ ಮಾತನಾಡಿದ ಅವರು, ಚೀನಾ ಸೇರಿದಂತೆ ಬೇರೆ ದೇಶಗಳಲ್ಲಿ ಕೋವಿಡ್ ಪ್ರಕರಣಗಳ ಹೆಚ್ಚಳ ಹಿನ್ನೆಲೆಯಲ್ಲಿ, ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಸಭೆ ನಡೆಸಿ ಚರ್ಚಿಸಲಾಗಿದೆ. ಈಗಾಗಲೇ 2-3 ಸಾವಿರ ಜನರಿಗೆ ಕೊರೊನಾ ಪರೀಕ್ಷೆ ಮಾಡಲಾಗುತ್ತಿದೆ. ಇದರ ಜೊತೆಗೆ, ರಾಜ್ಯದಲ್ಲಿ ಐಎಲ್‌ಐ ಮತ್ತು ಸಾರಿ ಸಮಸ್ಯೆ ಇರುವವರಿಗೆ ಕಡ್ಡಾಯವಾಗಿ ಕೊರೊನಾ ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ. ಒಳಾಂಗಣ ಸ್ಥಳ, ಎಸಿ ಇರುವ ಕಡೆಗಳಲ್ಲಿ ಮಾಸ್ಕ್ ಧರಿಸಬೇಕು ಎಂದು ಸೂಚನೆ ನೀಡಲಾಗುವುದು. ವಿದೇಶದಿಂದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ಬರುವ ಪ್ರಯಾಣಿಕರಿಗೆ ಪರೀಕ್ಷೆ ಮಾಡಲು ಕೇಂದ್ರ ಸರ್ಕಾರದ ಮಾರ್ಗಸೂಚಿ ಅನುಸರಿಸಲಾಗುವುದು. ಈಗಾಗಲೇ ವಿಮಾನ ನಿಲ್ದಾಣದಲ್ಲಿ ಕೆಲವರಿಗೆ ಪರೀಕ್ಷೆ ಮಾಡಲಾಗುತ್ತಿದೆ ಎಂದು ತಿಳಿಸಿದರು.ಅನೇಕ ಆಸ್ಪತ್ರೆಗಳಲ್ಲಿ ಆಕ್ಸಿಜನ್ ಘಟಕಗಳನ್ನು ಅಳವಡಿಸಲಾಗಿದೆ. ಇವುಗಳು ಸರಿಯಾಗಿ ಕಾರ್ಯ ನಿರ್ವಹಿಸುವಂತೆ ಸಿದ್ಧತೆ ಕೈಗೊಳ್ಳಲು ಸೂಚಿಸಲಾಗುವುದು. ಜಿಲ್ಲಾಸ್ಪತ್ರೆಗಳಲ್ಲಿ ಕೆಲ ಹಾಸಿಗೆಗಳನ್ನು ಕೋವಿಡ್ಗೆ ಮೀಸಲಿಡಲು ತೀರ್ಮಾನವಾಗಿದೆ. ಖಾಸಗಿ ಆಸ್ಪತ್ರೆಯಲ್ಲೂ ಹಾಸಿಗೆ ಮೀಸಲಿಡಲು ಸೂಚಿಸಲಾಗುವುದು ಎಂದು ತಿಳಿಸಿದರು.

ಕೇಂದ್ರ ಸರ್ಕಾರದ ಮಟ್ಟದಲ್ಲಿ ಸಭೆ ನಡೆಯುತ್ತಿದ್ದು, ಅಲ್ಲಿಂದ ನೀಡುವ ಮಾರ್ಗಸೂಚಿಯನ್ನು ನೋಡಿಕೊಂಡು ರಾಜ್ಯದಲ್ಲಿ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಲಾಗುವುದು ಎಂದರು.ಕೋವಿಡ್ ಪ್ರಕರಣ ಕಡಿಮೆಯಾದ ಹಿನ್ನೆಲೆಯಲ್ಲಿ, ಜನರು ಮೂರನೇ ಡೋಸ್ನ ಲಸಿಕೆ ಪಡೆಯಲು ಆಸಕ್ತಿ ತೋರುತ್ತಿಲ್ಲ. ಇದರಿಂದಾಗಿ 3 ನೇ ಡೋಸ್ ಲಸಿಕಾಕರಣದಲ್ಲಿ ಶೇ.20 ರಷ್ಟು ಮಾತ್ರ ಪ್ರಗತಿಯಾಗಿದೆ. ಇದಕ್ಕಾಗಿ ಎಲ್ಲಾ ತಾಲೂಕುಗಳಲ್ಲಿ ವಿಶೇಷ ಲಸಿಕಾ ಶಿಬಿರ ಏರ್ಪಡಿಸಿ, 3 ನೇ ಡೋಸ್ನಲ್ಲೂ ಶೇ.100 ರಷ್ಟು ಗುರಿ ತಲುಪಲು ಸೂಚಿಸಲಾಗಿದೆ.

Check Also

ಮಂಗಳೂರು: ಇಲಿ ಜ್ವರಕ್ಕೆ ಕಾಲೇಜು ವಿದ್ಯಾರ್ಥಿನಿ ಬಲಿ..!!

ಇಲಿ ಜ್ವರಕ್ಕೆ ಯುವತಿ ಸಾವನ್ನಪ್ಪಿದ ಘಟನೆ  ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ವರದಿಯಾಗಿದ್ದು ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಸಂಕ್ಲಾಪುರ ಗ್ರಾಮದಲ್ಲಿ …

Leave a Reply

Your email address will not be published. Required fields are marked *

You cannot copy content of this page.