ಕೇಸರಿ ಶಾಲು, ದತ್ತಮಾಲೆ ಹಾಕಿದ್ರೆ ಹೊಟ್ಟೆ ತುಂಬಲ್ಲ : ಕಾಂಗ್ರೆಸ್ ಶಾಸಕ ವಿವಾದಾತ್ಮಕ ಹೇಳಿಕೆ

ಚಿಕ್ಕಮಗಳೂರು : ಹಿಂದೂಪರ ಸಂಘಟನೆಗಳ ವಿರುದ್ಧ ಶೃಂಗೇರಿ ಕಾಂಗ್ರೆಸ್ ಶಾಸಕ ಟಿ.ಡಿ ರಾಜೇಗೌಡ ವಿವಾದಾತ್ಮಕ ಹೇಳಿಕೆ ನೀಡಿದ್ದು, ಸದ್ಯ ಅವರು ಮಾತನಾಡಿದ್ದಾರೆ ಎನ್ನಲಾದ ಆಡಿಯೋವೊಂದು ವೈರಲ್ ಆಗಿದೆ.

ಶೃಂಗೇರಿ ಶಾಸಕ ಟಿ.ಡಿ. ರಾಜೇಗೌಡ ಮಾತನಾಡಿದ್ದಾರೆ ಎನ್ನಲಾದ ಆಡಿಯೋದಲ್ಲಿ, ಹಿಂದೂಪರ ಸಂಘಟನೆಗಳ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದು, ಕೇಸರಿ ಶಾಲು, ಕುಂಕುಮ, ದತ್ತಮಾಲೆ ಹಾಕಿದ್ರೆ ಹೊಟ್ಟೆ ತುಂಬುವುದಿಲ್ಲ. ದತ್ತಪೀಠದ ಹೋರಾಟದಿಂದ ಅನ್ನ ಸಿಗುವುದಿಲ್ಲ ಎಂದು ಹೇಳಿದ್ದಾರೆ.

ಅಯೋಧ್ಯೆ ಹೋರಾಟದಲ್ಲಿ ಬಾಬ್ರಿ ಮಸೀದಿ ಧ್ವಂಸದ ಸಂದರ್ಭದಲ್ಲಿ ಲಕ್ಷಾಂತರ ಜನರು ಸಾವನ್ನಪ್ಪಿದ್ದಾರೆ. ಹಿಂದೂಪರ ಸಂಘಟನೆಗಳು ಹೋರಾಟದಲ್ಲಿ ಲಕ್ಷಾಂತರ ಜನರನ್ನ ಬಲಿಕೊಟ್ಟಿದ್ದಾರೆ ಎಂದು ಮಾತನಾಡಿರುವ ಆಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಇನ್ನು ಶೃಂಗೇರಿ ಶಾಸಕರ ವಿರುದ್ದ ಹಿಂದೂ ಪರ ಸಂಘಟನೆಗಳಿಂದ ಭಾರೀ ಆಕ್ರೋಶ ವ್ಯಕ್ತವಾಗಿದ್ದು, ಶಾಸಕ ರಾಜೇಗೌಡ ಬಹಿರಂಗವಾಗಿ ಹಿಂದೂಪರ ಸಂಘಟನೆಗಳ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿವೆ.

Check Also

ಕೇರಳದಲ್ಲಿ ‘ವೆಸ್ಟ್‌ ನೈಲ್’ ಜ್ವರದ ಆತಂಕ- ದ.ಕ. ಜಿಲ್ಲೆಯಲ್ಲೂ ವಿಶೇಷ ನಿಗಾ

ಮಂಗಳೂರು: ನೆರೆಯ ಕೇರಳದ ಮಲಪ್ಪುರಂ, ಕೋಯಿಕ್ಕೋಡ್, ತೃಶೂರ್ ಪ್ರದೇಶದಲ್ಲಿ ‘ವೆಸ್ಟ್ ನೈಲ್’ ಜ್ವರ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ …

Leave a Reply

Your email address will not be published. Required fields are marked *

You cannot copy content of this page.