13 ವರ್ಷದ ಬಾಲಕಿಯನ್ನು ಆಕೆಯ ಮಲತಂದೆ ವೇಶ್ಯಾವಾಟಿಕೆಗೆ ತಳ್ಳಿದ ಆಘಾತಕಾರಿ ಘಟನೆ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಆಟೋ ಚಾಲಕನ ಮೂಲಕ ಬಾಲಕಿಯನ್ನು ವೇಶ್ಯಾವಾಟಿಕೆಗೆ ತಳ್ಳಿದ ಆರೋಪ ಕೇಳಿ ಬಂದಿದ್ದು, ಚಿಕ್ಕಬಳ್ಳಾಪುರ ಮಹಿಳಾ ಪೊಲೀಸರು ಬಾಲಕಿಯನ್ನು ರಕ್ಷಣೆ ಮಾಡಿದ್ದಾರೆ.
ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸಲಾಗಿದೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.