
ವಿಟ್ಲ: ನಾಪತ್ತೆಯಾಗಿದ್ದ ವಿದ್ಯಾರ್ಥಿನಿಯ ಮೃತದೇಹ ಕೆರೆಯಲ್ಲಿ ಪತ್ತೆಯಾದ ಘಟನೆ ನಡೆದಿದೆ. . ಕೊಡಂಗಾಯಿ ಬಳಿಯ ಮೂರ್ಕಜೆ ಎಂಬಲ್ಲಿರುವ ಮೈತ್ರೇಯಿ ಗುರುಕುಲ ವಿದ್ಯಾಸಂಸ್ಥೆಯ 10ನೇ ತರಗತಿಯ ವಿದ್ಯಾರ್ಥಿನಿಯಾಗಿರುವ ಬೆಂಗಳೂರು ವೈಗ ಲಕ್ಷ್ಮೀ ಮೃತ ದುರ್ದೈವಿ.
ಇಂದು ಗುರುಕುಲದ ಕೆರೆಯಲ್ಲಿ ಆಕೆಯ ಮೃತದೇಹ ಪತ್ತೆಯಾಗಿದೆ. ವಿಟ್ಲ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಮೃತದೇಹವನ್ನು ಮೇಲಕ್ಕೆತ್ತಿ, ಮರಣೋತ್ತರ ಪರೀಕ್ಷೆಗಾಗಿ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ.
