ಮಂಗಳೂರು: ಮತದಾರರು ಮತಗಟ್ಟೆಗೆ ಬರುವಾಗ ಮೊಬೈಲ್ ತರುವಂತಿಲ್ಲ – ಡಿಸಿ

ಮಂಗಳೂರು: ಮತ ಚಲಾವಣೆಗೆ ಮತಗಟ್ಟೆಗೆ ಬರುವ ಮತದಾರರು ಮೊಬೈಲ್ ಪೋನ್ ಅನ್ನು ತರುವಂತಿಲ್ಲ ಎಂದು ದ.ಕ.ಜಿಲ್ಲಾ ಚುನಾವಣಾಧಿಕಾರಿ ಮುಲ್ಲೈ ಮುಗಿಲನ್ ತಿಳಿಸಿದ್ದಾರೆ. ದ.ಕ.ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಾಹಿತಿ ನೀಡಿದ ಅವರು, ಚುನಾವಣಾ ಆಯೋಗದ ನಿಯಮದಂತೆ ಮತದಾರರು ಮತ ಚಲಾಯಿಸಲು ಬರುವಾಗ ಮೊಬೈಲ್ ಪೋನ್ ತರುವಂತಿಲ್ಲ. ಮೊಬೈಲ್ ನೊಂದಿಗೆ ಮತಗಟ್ಟೆಯೊಳಗೆ ಪ್ರವೇಶಿಸಲು ಅವಕಾಶ ನೀಡಲಾಗುವುದಿಲ್ಲ. ಒಂದು ವೇಳೆ ಮೊಬೈಲ್ ತಂದಲ್ಲಿ ಅದನ್ನು ಸೇಫ್ ಡೆಪಾಸಿಟ್ ಮಾಡಲು ವ್ಯವಸ್ಥೆ ಮಾಡಲಾಗುವುದು. ಆದರೆ ಮತ್ತೊಂದು ಸರತಿ ಸಾಲು ಆಗುವ ಬದಲು ಮತದಾರರು ಮೊಬೈಲ್ ಅನ್ನು ಮನೆಯಲ್ಲಿಯೇ ಬಿಟ್ಟು ಬರುವುದು ಉತ್ತಮ ಎಂದು ತಿಳಿಸಿದ್ದಾರೆ. ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಚುನಾವಣಾ ಬಹಿಷ್ಕಾರವಿಲ್ಲ. ಕೆಲವೆಡೆ ಚುನಾವಣಾ ಬಹಿಷ್ಕಾರಕ್ಕೆ ಕರೆ ಕೊಡಲಾಗಿತ್ತು. ಅಲ್ಲಿಗೆ ಹೋಗಿ ಪರಿಶೀಲಿಸಿದಾಗ ರಸ್ತೆ ಮೊದಲಾದ ಮೂಲಭೂತ ಸೌಕರ್ಯಕ್ಕೆ ಆಗ್ರಹಿಸಿ ಚುನಾವಣಾ ಬಹಿಷ್ಕಾರಕ್ಕೆ ಕರೆ ನೀಡಲಾಗಿತ್ತು. ಅವರನ್ನು ಮನವೊಲಿಸಿ ಚುನಾವಣಾ ಬಹಿಷ್ಕಾರ ಕರೆಯನ್ನು ವಾಪಾಸು ಪಡೆಯಲಾಗಿದ್ದು, ಸದ್ಯ ಯಾವುದೇ ಚುನಾವಣಾ ಬಹಿಷ್ಕಾರ ಇಲ್ಲ ಎಂದು ತಿಳಿಸಿದರು.

Check Also

ಮಂಗಳೂರು: ಸ್ಕಿಡ್ಡಾಗಿ ಬಿದ್ದ ಸ್ಕೂಟರ್ – ಯುವಕ ಮೃತ್ಯು…!!

ಮಂಗಳೂರು: ನಗರದ ಸಮೀಪ ಯುವಕ ಚಲಾಯಿಸುತ್ತಿದ್ದ ಸ್ಕೂಟರ್ ಗೆ ದನ ಅಡ್ಡ ಬಂದ ಪರಿಣಾಮ ಸ್ಕೂಟರ್ ಸ್ಕಿಡ್ ಆಗಿ ಯುವಕ …

Leave a Reply

Your email address will not be published. Required fields are marked *

You cannot copy content of this page.