ಅಪ್ರಾಪ್ತೆ ಮೇಲೆ ಹಲವು ತಿಂಗಳಿನಿಂದ ಆಶ್ರಮದಲ್ಲೇ ಅತ್ಯಾಚಾರ: ಸ್ವಾಮೀಜಿ ಅರೆಸ್ಟ್!

ತಾನೇ ನಡೆಸುತ್ತಿದ್ದ ಆಶ್ರಮದಲ್ಲಿ 15 ವರ್ಷದ ಅನಾಥ ಬಾಲಕಿ ಮೇಲೆ ಹಲವು ತಿಂಗಳುಗಳಿಂದ ಅತ್ಯಾಚಾರ  ಎಸಗಿರುವ ಆರೋಪದ ಮೇಲೆ ಆಂಧ್ರಪ್ರದೇಶದಲ್ಲಿ ಸ್ವಾಮೀಜಿಯೊಬ್ಬರನ್ನು ಬಂಧಿಸಲಾಗಿದೆ.

ಘಟನೆ ವಿಶಾಖಪಟ್ಟಣದಲ್ಲಿನ ಆಶ್ರಮದಲ್ಲಿ ನಡೆದಿದೆ. ಬಾಲಕಿ ಜೂನ್ 13ರಂದು ಆಶ್ರಮದಿಂದ ತಪ್ಪಿಸಿಕೊಂಡು ಹೋಗಿದ್ದು, ಈ ಬಗ್ಗೆ ಪೊಲೀಸರು ನಾಪತ್ತೆಯ ದೂರನ್ನು ದಾಖಲಿಸಿಕೊಂಡಿದ್ದರು. ಬಳಿಕ ಬಾಲಕಿ ವಿಜಯವಾಡ ತಲುಪಿ ಆಶ್ರಮದ ಸ್ವಾಮೀಜಿ ಪೂರ್ಣಾನಂದ ಸರಸ್ವತಿ ವಿರುದ್ಧ ದೂರು ನೀಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಬಾಲಕಿಯ ಪೋಷಕರು ಆಕೆ ಚಿಕ್ಕವಳಿದ್ದಾಗಲೇ ನಿಧನರಾಗಿದ್ದಾರೆ. ಬಳಿಕ ಆಕೆಯ ಅಜ್ಜಿ 2 ವರ್ಷಗಳ ಹಿಂದೆ ಆಶ್ರಮದಲ್ಲಿ ಅವಳನ್ನು ಬಿಟ್ಟು ಹೋಗಿರುವುದಾಗಿ ತಿಳಿಸಿದ್ದಾಳೆ. ಕಳೆದ ಹಲವು ತಿಂಗಳುಗಳಿಂದ ಪೂರ್ಣಾನಂದ ಸರಸ್ವತಿ ತನಗೆ ಪದೇ ಪದೇ ಹಿಂಸೆ ನೀಡುತ್ತಿದ್ದರು ಹಾಗೂ ಲೈಂಗಿಕ ಕಿರುಕುಳ ನೀಡುತ್ತಿದ್ದರು ಎಂದು ಬಾಲಕಿ ದೂರು ನೀಡಿದ್ದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.

Check Also

ಕಾರವಾರ: ಮಳೆಗೆ ಗುಡ್ಡ ಕುಸಿದು ʻಕಾರವಾರ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ‌ʼ ಬಂದ್ : ವಾಹನ ಸವಾರರ ಪರದಾಟ

ಕಾರವಾರ : ರಾಜ್ಯಾದ್ಯಂತ ಮಳೆಯ ಆರ್ಭಟ ಮುಂದುವರೆದಿದ್ದು, ಭಾರೀ ಮಳೆಯಿಂದಾಗಿ ಗುಡ್ಡ ಕುಸಿದ ಪರಿಣಾಮ ಕಾರವಾರ-ಬೆಂಗಳುರು ರಾಷ್ಟ್ರೀಯ ಹೆದ್ದಾರಿ ಸಂಚಾರ …

Leave a Reply

Your email address will not be published. Required fields are marked *

You cannot copy content of this page.