March 6, 2026
yashpal-suvarna-99424687

ಉಡುಪಿ: ಉಡುಪಿ ಶಾಸಕ, ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಯಶಪಾಲ್‌ ಸುವರ್ಣ ಅವರಿಗೆ ಜೀವ ಬೆದರಿಕೆಯೊಡ್ಡಿದ ಪ್ರಕರಣಕ್ಕೆ ಸಂಬಂಧಿಸಿದ ಮತ್ತೋರ್ವ ಆರೋಪಿಯನ್ನು ಕಾಪು ಪೊಲೀಸರು ಜೂ. 22ರಂದು ಮುಂಬಯಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆದು ಕರೆದುಕೊಂಡು ಬಂದಿದ್ಧಾರೆ. ಮಂಗಳೂರು ಬಜ್ಪೆ ನಿವಾಸಿ ಮಹಮ್ಮದ್‌ ಆಸಿಫ್ (32) ಬಂಧಿತ ಆರೋಪಿ.

ಕಳೆದ ಜೂನ್‌ ತಿಂಗಳಿನಲ್ಲಿ ಕರಾವಳಿಯಲ್ಲಿ ಹಿಜಾಬ್‌ ವಿವಾದ ತಾರಕಕ್ಕೇರಿದ್ದ ಸಂದರ್ಭ ಯಶಪಾಲ್‌ ಸುವರ್ಣ ಅವರಿಗೆ ಆರೋಪಿಗಳು ಸಾಮಾಜಿಕ ಜಾಲತಾಣದಲ್ಲಿ ಜೀವ ಬೆದರಿಕೆಯೊಡ್ಡಿದ್ದರು. ಈ ಬಗ್ಗೆ ಆರೋಪಿಗಳನ್ನು ಬಂಧಿಸುವಂತೆ ಕಾಪು ಕ್ಷೇತ್ರ ಬಿಜೆಪಿ ಯುವ ಮೋರ್ಚಾದ ಪದಾಧಿಕಾರಿಗಳು ಕಾಪು ಠಾಣೆಗೆ ದೂರು ನೀಡಿದ್ದರು.

ಪ್ರಮುಖ ಆರೋಪಿ ಬಜ್ಪೆ ಸಮೀಪದ ಕೆಂಜಾರು ನಿವಾಸಿ ಮಹಮ್ಮದ್‌ ಶಾಫಿ (26)ಯನ್ನು ಕಾಪು ಪೊಲೀಸರು ಈ ಹಿಂದೆಯೇ ಬಂಧಿಸಿದ್ದು, ಆಸಿಫ್ ತಲೆಮರೆಸಿಕೊಂಡಿದ್ದ. ಆತ ವಿದೇಶದಿಂದ ಬಂದು ಮುಂಬಯಿ ವಿಮಾನ ನಿಲ್ದಾಣದಲ್ಲಿ ಇಳಿಯುತ್ತಿರುವ ಬಗ್ಗೆ ಮಾಹಿತಿ ಪಡೆದ ಪೊಲೀಸರು ವಶಕ್ಕೆ ಪಡೆದುಕೊಂಡಿದ್ಧಾರೆ. ಬಳಿಕ ಕೋರ್ಟ್‌ಗೆ ಹಾಜರುಪಡಿಸಿದ್ದು ಒಂದು ದಿನ ಪೊಲೀಸ್‌ ಕಸ್ಟಡಿಗೆ ನೀಡಲಾಗಿದೆ.

About The Author

Leave a Reply

Your email address will not be published. Required fields are marked *

You cannot copy content of this page.