ಧರ್ಮಸ್ಥಳ ಮಂಜುನಾಥನ ದರ್ಶನ ಪಡೆದ ಮಾಜಿ ಸಿಎಂ ಯಡಿಯೂರಪ್ಪ

ಬೆಳ್ತಂಗಡಿ: ಮಾಜಿ ಮುಖ್ಯಮಂತ್ರಿ ಬಿ.ಎಸ್‌‍.ಯಡಿಯೂರಪ್ಪ ಅವರು ಧರ್ಮಸ್ಥಳ ಕ್ಷೇತ್ರಕ್ಕೆ ಭೇಟಿ ನೀಡಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದಿದ್ದಾರೆ. ನಿನ್ನೆ ಧರ್ಮಸ್ಥಳಕ್ಕೆ ಆಗಮಿಸಿದ ಅವರು, ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.

ಇಂದು ಬೆಳಗ್ಗೆ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಜೊತೆಯಲ್ಲಿ ದೇವರ ದರ್ಶನ ಪಡೆದ ನಂತರ ದೇವಾಲಯದಲ್ಲಿ ಡಾ ಡಿ. ವೀರೇಂದ್ರ ಹೆಗ್ಗಡೆಯವರು ಯಡಿಯೂರಪ್ಪನವರನ್ನು ಗೌರವಿಸಿದರು.

ಬಳಿಕ ಮಾಧ್ಯಮದ ಜೊತೆ ಮಾತನಾಡಿದ ಅವರು ಬಹಳ ವರ್ಷಗಳ ನಂತರ ಧರ್ಮಸ್ಥಳ ಕ್ಷೇತ್ರಕ್ಕೆ ಭೇಟಿ ನೀಡಿದ್ದೇನೆ. ನಮ್ಮ ಭಾಗದಲ್ಲಿ ಬರಗಾಲವಿದ್ದು, ಮಳೆಯಾಗಿ ಸಮೃದ್ಧಿಯಿಂದ ಬೆಳೆಯಾಗಲಿ ಎಂದು ಮಂಜುನಾಥನಲ್ಲಿ ಪ್ರಾರ್ಥಿಸಿದ್ದೇನೆ ಎಂದ ಅವರು ವೀರೇಂದ್ರ ಹೆಗ್ಗಡೆಯವರ ಜೊತೆಗೆ ದೇವರ ದರ್ಶನ ಮಾಡಲು ಅವಕಾಶ ಸಿಕ್ಕಿದ್ದು ನನ್ನ ಸೌಭಾಗ್ಯ ಎಂದಿದ್ದಾರೆ.

ಈ ಸಂದರ್ಭದಲ್ಲಿ ಬೆಳ್ತಂಗಡಿ ಶಾಸಕ ಹರೀಶ್‌ ಪೂಂಜ, ಬೆಳ್ತಂಗಡಿ ಬಿಜೆಪಿ ಮಂಡಲ ಅಧ್ಯಕ್ಷ ಶ್ರೀನಿವಾಸ್‌‍ ರಾವ್‌ ಸೇರಿದಂತೆ ಇನ್ನು ಅನೇಕರು ಜೊತೆಯಲ್ಲಿದ್ದರು.

Check Also

ಉಳ್ಳಾಲ: ಬಟ್ಟಪಾಡಿಯಲ್ಲಿ ಅಲೆಗಳ ಅಬ್ಬರಕ್ಕೆ ಮನೆ ಸಮುದ್ರಪಾಲು

ಉಚ್ಚಿಲ ಬಟ್ಟಪಾಡಿಯಲ್ಲಿ ಕಡಲ್ಕೊರೆತ ತೀವ್ರಗೊಂಡಿದ್ದು ನಿನ್ನೆ ಮನೆಯೊಂದು ಸಮುದ್ರಪಾಲಾಗಿದೆ. ಈ ಮನೆಯಲ್ಲಿ ನೆಲೆಸಿದ್ದ ಬೀಫಾತುಮ್ಮಾ ಅವರ ಕುಟುಂಬವನ್ನು ಬುಧವಾರವೇ ಸ್ಥಳಾಂತರ …

Leave a Reply

Your email address will not be published. Required fields are marked *

You cannot copy content of this page.