

ಸಿಎಂ ಸಿದ್ದರಾಮಯ್ಯಗೆ ಬಿಗ್ ಶಾಕ್ ಬೆಂಗಳೂರು: ಮುಡಾ ಪ್ರಕರಣದಲ್ಲಿ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿ ಹೈಕೋರ್ಟ್ ನ್ಯಾಯಮೂರ್ತಿ ನಾಗಪ್ರಸನ್ನ ಅವರು ಮಹತ್ವದ ಆದೇಶ ನೀಡಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರು ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ನೀಡಿದ ಅನುಮತಿಯನ್ನು ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ನ್ಯಾಯಮೂರ್ತಿ ನಾಗಪ್ರಸನ್ನ ವಜಾಗೊಳಿಸಿದ್ದಾರೆ. ಈ ಮೂಲಕ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದಾರೆ.