ಕಾಪು: ಭಾರತ್ ಬ್ಯಾಂಕ್ ವಿಲೇಪಾರ್ಲೆ ಪೂರ್ವ ಶಾಖೆಯ ಉಪಪ್ರಬಂಧಕ, ಮುಂಬಯಿ ಬಿಲ್ಲವರ ಅಸೋಸಿಯೇಶನ್ ಸದಸ್ಯ ಸುಧಾಕರ್ ಟಿ. ಅಂಚನ್ (52) ಸಂಬಂಧಿಕರ ಮದುವೆಗೆ ಆಗಮಿಸಿ, ಮುಂಬಯಿಗೆ ತೆರಳುತ್ತಿದ್ದ ವೇಳೆ ರೈಲ್ವೇ ನಿಲ್ದಾಣದಲ್ಲೇ ಹೃದಯಾಘಾತಕ್ಕೊಳಗಾಗಿ ಮೃತಪಟ್ಟಿದ್ದಾರೆ. ಮದುವೆಗಾಗಿ ಊರಿಗೆ ಬಂದಿದ್ದು, ಮದುವೆ ಮುಗಿಸಿ ಮುಂಬಯಿಗೆ ಹಿಂದಿರುಗುತ್ತಿದ್ದ ವೇಳೆ ಥಾಣೆಯಲ್ಲಿ ರೈಲಿನಿಂದ ಇಳಿಯುತ್ತಿದ್ದಾಗ ಹೃದಯಾಘಾತಕ್ಕೊಳಗಾಗಿ ಅಸುನೀಗಿದ್ದಾರೆ. ಕಟಪಾಡಿಯವರಾಗಿರುವ ಅವರು ಮುಂಬಯಿಯಲ್ಲಿ ನೆಲೆಸಿದ್ದು ಭಾರತ್ ಬ್ಯಾಂಕ್ ಉದ್ಯೋಗಿಯಾಗಿ, ಬಿಲ್ಲವ ಸಮಾಜದ ಸಂಘಟನೆಯ ಪ್ರಮುಖರಾಗಿ ಗುರುತಿಸಲ್ಪಟ್ಟಿದ್ದರು. ಇವರ ನಿಧನಕ್ಕೆ ಹಲವು ಮಂದಿ ಗಣ್ಯರು ಸಂತಾಪ ಸೂಚಿಸಿದ್ದಾರೆ. ಮೃತರು ತಾಯಿ, ಪತ್ನಿ, ಮತ್ತು ಪುತ್ರನನ್ನು ಅಗಲಿದ್ದಾರೆ.
Check Also
ಬಂಟ್ವಾಳ: ಬ್ಯಾಂಕ್ ಶಾಖೆಯೊಳಗಿಂದಲೇ ನಿವೃತ್ತ ಸೈನಿಕರೊಬ್ಬರ 1.30 ಲಕ್ಷ ಇದ್ದ ಬ್ಯಾಗ್ ಕಳವು
ಬಂಟ್ವಾಳ: ಇಲ್ಲಿನ ಬಿ.ಸಿ.ರೋಡಿನ ಬ್ಯಾಂಕ್ ಶಾಖೆಯೊಳಗಿಂದಲೇ ನಿವೃತ್ತ ಸೈನಿಕರೊಬ್ಬರ 1.30 ಲಕ್ಷ ರೂ. ನಗದು ಇದ್ದ ಬ್ಯಾಗ್ ಎಗರಿಸಿ ಪರಾರಿಯಾಗಿರುವ …