ಮಂಗಳೂರು : ಮಂಗಳೂರು ಸ್ಪೋಟ ಘಟನೆ ಬಳಿಕ ರಾಜ್ಯದ ಕರಾವಳಿಯಲ್ಲಿ ಮತ್ತೆ ಧರ್ಮ ದಂಗಲ್ ಆರಂಭವಾಗಿದೆ.
ಈ ಬಾರಿ ಕುಕ್ಕೆ ಸುಬ್ರಮಣ್ಯದ ಷಷ್ಠಿ ಮಹೋತ್ಸವದಲ್ಲಿ ಹಿಂದೂಯೇತರರಿಗೆ ವ್ಯಾಪಾರ ನಡೆಸದಂತೆ ನಿಷೇಧ ಹೇರಬೇಕೆಂದು ಹಿಂದೂ ಜಾಗರಣ ವೇದಿಕೆ ಆಗ್ರಹಿಸಿದೆ.
ಈ ಬಾರಿ ಷಷ್ಟಿ ಮಹೋತ್ಸವದಲ್ಲಿ ಹಿಂದೂಯೇತರರಿಗೆ ವ್ಯಾಪಾರ ನಡೆಸದಂತೆ ನಿಷೇಧ ಹೇರಬೇಕೆಂದು ಹಿಂದೂ ಜಾಗರಣ ವೇದಿಕೆ ಆಗ್ರಹಿಸಿದೆ. ಅಲ್ಲದೇ ಹಿಂದೂ ಸಂಘಟನೆಯ ಮುಖಂಡ ಹರಿಪ್ರಸಾದ್ ಎಂಬವರು ಸುಬ್ರಹ್ಮಣ್ಯ ಪೊಲೀಸ್ ಠಾಣೆಗೆ ದೂರು ನೀಡಿದ್ದು , ಕ್ಷೇತ್ರದ ಪಾವಿರ್ತ್ಯತೆ ಕಾಪಾಡಬೇಕೆಂದು ಮನವಿ ಮಾಡಿದ್ದಾರೆ.
ಪ್ರತೀ ವರ್ಷ ಕುಕ್ಕೆ ಸುಬ್ರಮಣ್ಯದ ಷಷ್ಠಿ ಮಹೋತ್ಸವದಲ್ಲಿ ಹಿಂದೂ-ಮುಸ್ಲಿಂ ಸೇರಿದಂತೆ ಎಲ್ಲಾ ಜಾತಿ ಧರ್ಮದವರೂ ಇಲ್ಲಿ ವ್ಯಾಪಾರ ನಡೆಸುತ್ತಿದ್ದರು. ಆದರೆ ಈ ಬಾರಿ ಹಿಂದೂಸಂಘಟನೆಗಳು ಇದಕ್ಕೆ ವಿರೋಧ ವ್ಯಕ್ತಪಡಿಸಿದೆ. ಹಿಂದೂಯೇತರರಿಗೆ ವ್ಯಾಪಾರ ನಡೆಸದಂತೆ ನಿಷೇಧ ಹೇರಬೇಕೆಂದು ಹಿಂದೂ ಜಾಗರಣ ವೇದಿಕೆ ಆಗ್ರಹಿಸಿದೆ.