ಧರ್ಮಸ್ಥಳದಲ್ಲಿ ಭೀಕರ ರಸ್ತೆ ಅಪಘಾತ: ಓರ್ವ ಸಾವು-7ಮಂದಿಗೆ ಗಂಭೀರ

ಬೆಳ್ತಂಗಡಿ: ಬೊಲೇರೋ ವಾಹನ ಹಾಗೂ ಸರಕಾರಿ ಬಸ್ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಓರ್ವ ಸಾವನ್ನಪ್ಪಿದ್ದು, ಏಳು ಜನರು ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾದಂತಹ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದ ಕುದ್ರಾಯದಲ್ಲಿ ನಡೆದಿದೆ.

ಇಲ್ಲಿನ ಪ್ರಸಿದ್ಧ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಅಗಮಿಸುತ್ತಿದ್ದ ಮಂಡ್ಯ ಜಿಲ್ಲೆಯ ಹತ್ತು ಮಂದಿಯ ಕುಟುಂಬ ನಿಡ್ಲೆ ಗ್ರಾಮದ ಕುದ್ರಾಯ ಎಂಬಲ್ಲಿ ಬೊಲೇರೋ ವಾಹನವನ್ನು ರಸ್ತೆಯ ಬಲಕ್ಕೆ ಪಾರ್ಕ್ ಮಾಡಿ ನಿಲ್ಲಿಸಿ ಇಳಿದು ಅಂಗಡಿ ಹೋಗುತ್ತಿದ್ದರು. ಈ ವೇಳೆ ಧರ್ಮಸ್ಥಳ ಡಿಪೋದಿಂದ ಮೈಸೂರಿಗೆ ತೆರಳುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ ನಿಂತಿದ್ದವರಿಗೆ ಹಾಗೂ ಬೊಲೋರೊ ವಾಹನಕ್ಕೆ ಡಿಕ್ಕಿ ಹೊಡೆದಿದೆ.

ಈ ವೇಳೆ ಮಂಡ್ಯ ಜಿಲ್ಲೆಯ ಚೆನ್ನಸಾಂದ್ರ ನಿವಾಸಿಯಾದ 63 ವರ್ಷದ ಮಾಹದೇವ ಎಂಬವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಐದು ಜನ ಮಹಿಳೆಯರು , ಓರ್ವ ಗಂಡಸು ,ಒಂದು ಮಗು ಸೇರಿ ಏಳು ಮಂದಿಗೆ ಗಂಭೀರ ಗಾಯವಾಗಿದ್ದು ಇವರನ್ನು ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ. ಈ ಬಗ್ಗೆ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ‌.

Check Also

ಕಾರವಾರ: ಮಳೆಗೆ ಗುಡ್ಡ ಕುಸಿದು ʻಕಾರವಾರ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ‌ʼ ಬಂದ್ : ವಾಹನ ಸವಾರರ ಪರದಾಟ

ಕಾರವಾರ : ರಾಜ್ಯಾದ್ಯಂತ ಮಳೆಯ ಆರ್ಭಟ ಮುಂದುವರೆದಿದ್ದು, ಭಾರೀ ಮಳೆಯಿಂದಾಗಿ ಗುಡ್ಡ ಕುಸಿದ ಪರಿಣಾಮ ಕಾರವಾರ-ಬೆಂಗಳುರು ರಾಷ್ಟ್ರೀಯ ಹೆದ್ದಾರಿ ಸಂಚಾರ …

Leave a Reply

Your email address will not be published. Required fields are marked *

You cannot copy content of this page.