December 21, 2024
1600x960_1000827-ksrtc

ಮಂಗಳೂರು: ಮೂಡುಬಿದಿರೆಯಲ್ಲಿ ನಡೆಯುತ್ತಿರುವ ಜಾಂಬೂರಿಗೆ ರಾಜ್ಯ, ಹೊರ ರಾಜ್ಯಗಳಿಂದ ಆಗಮಿಸಿದ ಸ್ಕೌಟ್ಸ್‌ ಆಯಂಡ್‌ ಗೈಡ್ಸ್‌ನ 50,000ಕ್ಕಿಂತಲೂ ಹೆಚ್ಚಿನ ವಿದ್ಯಾರ್ಥಿಗಳು/ಪೋಷಕರು/ಶಿಕ್ಷಕರು ತಮ್ಮ ಊರುಗಳಿಗೆ ಹಿಂದಿರುಗುವ ವೇಳೆ ಡಿ. 26ರಿಂದ 28ರ ವರೆಗೆ ಜಿಲ್ಲೆಯಲ್ಲಿ ಕೆಎಸ್ಸಾರ್ಟಿಸಿ ಬಸ್‌ ಸಂಚಾರದಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಇದೆ.

ಕಾರ್ಯಕ್ರಮ ಮುಗಿಸಿ ಮರಳುವಾಗ ಮೂಡಬಿದಿರೆಯಿಂದ ರಾಜ್ಯದ ವಿವಿಧ ಸ್ಥಳಗಳಿಗೆ/ರೈಲು ನಿಲ್ದಾಣಗಳಿಗೆ ಹೆಚ್ಚುವರಿ ಸಾರಿಗೆಗಳ ವ್ಯವಸ್ಥೆ ಮಾಡಿ ವಾಹನಗಳನ್ನು ನಿಯೋಜಿಸಬೇಕಾಗಿರುತ್ತದೆ.

ಆದ್ದರಿಂದ ಧರ್ಮಸ್ಥಳ, ಉಪ್ಪಿನಂಗಡಿ, ಸುಬ್ರಹ್ಮಣ್ಯ, ಕಾಸರಗೋಡು ವಲಯಗಳಲ್ಲಿ ಕಾರ್ಯಾಚರಣೆ ಯಲ್ಲಿರುವ ಬಸ್‌ಗಳ ಕೊರತೆ ಉಂಟಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಹಿರಿಯ ವಿಭಾಗೀಯ ನಿಯಂತ್ರಣಾಧಿಕಾರಿ ಪ್ರಕಟನೆಯಲ್ಲಿ ಕೋರಿದ್ದಾರೆ.

About The Author

Leave a Reply

Your email address will not be published. Required fields are marked *

You cannot copy content of this page.