ಸುರತ್ಕಲ್:ವ್ಯಕ್ತಿಯೋರ್ವರಿಗೆ ಚೂರಿಯಿಂದ ಇರಿದು ದುಷ್ಕರ್ಮಿಗಳು ಪರಾರಿಯಾಗಿರುವ ಘಟನೆ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಕೃಷ್ಣಾಪುರ ನೈತಂಗಡಿ ಬಳಿ ನಡೆದಿದೆ.
ಕೃಷ್ಣಾಪುರ ನಿವಾಸಿ ಜಲೀಲ್ ಅವರ ಎದೆಯ ಭಾಗಕ್ಕೆ ಚೂರಿಯಿಂದ ಇರಿಯಲಾಗಿದೆ. ಜಲೀಲ್ ಮೇಲೆ ಇಬ್ಬರು ದುಷ್ಕರ್ಮಿಗಳ ತಂಡ ಚೂರಿಯಿಂದ ಇರಿದು ಪರಾರಿಯಾಗಿದ್ದಾರೆ ಎಂದು ವರದಿಯಾಗಿದೆ.ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಸ್ಥಳಕ್ಕೆ ಸುರತ್ಕಲ್ ಪೊಲೀಸರು ಭೇಟಿ ನೀಡಿದ್ದಾರೆ.ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.