ಅಂಗನವಾಡಿ ಕೇಂದ್ರದಲ್ಲಿ ಹಾವು ಕಚ್ಚಿದ ಪರಿಣಾಮ 5 ವರ್ಷದ ಬಾಲಕನೊಬ್ಬ ಸಾವನ್ನಪ್ಪಿರುವ ದಾರುಣ ಘಟನೆ ಹಾಸನ ಜಿಲ್ಲೆ, ಸಕಲೇಶಪುರ ತಾಲೂಕು ಯಸಳೂರು ಹೋಬಳಿಯ ದೊಡ್ಡ ಕಲ್ಲೂರು ಗ್ರಾಮದಲ್ಲಿ ನಡೆದಿದೆ.
ಗೌರಿ – ಯಶ್ವಂತ್ ದಂಪತಿಯ ಪುತ್ರ ರೋಹನ್ ಮೃತಪಟ್ಟ ಬಾಲಕನಾಗಿದ್ದು, ಈತ ಅಂಗನವಾಡಿ ಕೇಂದ್ರದಲ್ಲಿ ಆಟವಾಡುವಾಗ ಹಾವು ಕಚ್ಚಿದೆ.
ಈ ಸಂದರ್ಭದಲ್ಲಿ ಅಂಗನವಾಡಿ ಸಹಾಯಕಿ ಮಕ್ಕಳನ್ನು ಕರೆತರಲು ಮನೆಗಳಿಗೆ ಹೋಗಿದ್ದರು ಎನ್ನಲಾಗಿದೆ.
ಹಾವು ಕಚ್ಚಿದ ಪರಿಣಾಮ ಬಾಲಕ ಪ್ರಜ್ಞೆ ತಪ್ಪಿದ್ದು, ಆತಂಕಗೊಂಡ ಬಾಲಕನ ತಂದೆ ಬೈಕಿನಲ್ಲಿ ಹೆತ್ತೂರು ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದಿದ್ದರು. ಬಳಿಕ ಸಕಲೇಶಪುರಕ್ಕೆ ಹೋಗುವಂತೆ ತಿಳಿಸಲಾಗಿತ್ತು. ಅಲ್ಲಿ ಪ್ರಥಮ ಚಿಕಿತ್ಸೆ ನೀಡಿದ ನಂತರ ಹಾಸನ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದ್ದು, ಆದರೆ ಚಿಕಿತ್ಸೆ ಫಲಕಾರಿಯಾಗದೆ ಬಾಲಕ ಮೃತಪಟ್ಟಿದ್ದಾನೆ.