ಬೆಂಗಳೂರು: ಹಿಂದೂ ಪರ ಹೋರಾಟಗಾರ ಪುನೀತ್ ಕೆರೆಹಳ್ಳಿ ಮೇಲೆ ಗುಂಪೊಂದು ಹಲ್ಲೆ ನಡೆಸಿದ ಘಟನೆ ನಡೆದಿದ್ದು, ರಾಜ್ ಕುಮಾರ್ ಕುಟುಂಬದ ಕುರಿತು ಅವಹೇಳನಾಕಾರಿಯಾಗಿ ಮಾತನಾಡಿರುವ ಆರೋಪ ಹೊರಿಸಿ ಪುನೀತ್ ಕೆರೆಹಳ್ಳಿ ಮೇಲೆ ಹಲ್ಲೆ ನಡೆಸಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.
ವರದಿಗಳ ಪ್ರಕಾರ ಚಾಮರಾಜಪೇಟೆಯಲ್ಲಿ ಈ ಘಟನೆ ನಡೆದಿದ್ದು, ರಾಜ್ ಕುಮಾರ್ ಫ್ಯಾಮಿಲಿ ಬಗ್ಗೆ ಹಗುರವಾಗಿ ಮಾತನಾಡಿದ್ದೀಯಾ? ನೀನು ಕ್ಷಮೆ ಕೇಳಬೇಕು ಎಂದು ತಂಡ ಅವಾಜ್ ಹಾಕಿದ ಬಳಿಕ ಪುನೀತ್ ಕೆರೆಹಳ್ಳಿ ಮೇಲೆ ಹಲ್ಲೆ ನಡೆಸುತ್ತಿರುವುದು ಕಂಡು ಬಂದಿದೆ.
ಶಿವಕುಮಾರ್ ನಾಯ್ಕ್ ಬಣ ಹಲ್ಲೆ ನಡೆಸಿದೆ ಎಂಬ ಆರೋಪ ಕೇಳಿ ಬಂದಿದೆ. ಈ ಘಟನೆಗೂ ಮುನ್ನ ಪುನೀತ್ ಕೆರೆಹಳ್ಳಿಗೆ ಕರೆ ಮಾಡಿ ಕ್ಷಮೆ ಕೇಳುವಂತೆ ಹೇಳಲಾಗಿತ್ತು. ಆದರೆ, ಈ ವೇಳೆ ಕ್ಷಮೆ ಕೇಳಲು ನಿರಾಕರಿಸಿದ ಪುನೀತ್ ನಾನು ಚಾಮರಾಜಪೇಟೆಯಲ್ಲೇ ಇದ್ದೇನೆ, ಬರೋದಾದ್ರೆ ಬನ್ನಿ ಎಂದು ಅವಾಜ್ ಹಾಕಿದ್ದಾರೆ ಎನ್ನಲಾಗಿದೆ. ಹಲ್ಲೆ ಹಿನ್ನೆಲೆಯಲ್ಲಿ ಚಾಮರಾಜಪೇಟೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.