ಹಾಸನ : ಶಾಲಾ ಪ್ರವಾಸಕ್ಕೆ ತೆರಳಿದ್ದ ಬಸ್ ಪಲ್ಟಿಯಾಗಿದ್ದು, ನಾಲ್ವರು ವಿದ್ಯಾರ್ಥಿಗಳು ಸೇರಿದೆಂತೆ 7 ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ನಿಡಗೋಡು ಗ್ರಾಮದ ಬಳಿ ನಡೆದಿದೆ.
ರಾಮನಗರ ಜಿಲ್ಲೆಯ ಕನಕಪುರದಿಂದ ಶಾಲಾ ಪ್ರವಾಸಕ್ಕೆ 2 ಬಸ್ ಗಳಲ್‌ಇ 71 ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಪ್ರವಾಸಕ್ಕೆ ತೆರಳಿದ್ದರು. ಈ ವೇಳೆ ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ನಿಡಗೋಡು ಗ್ರಾಮದ ಬಳಿ ಬಸ್ ಪಲ್ಟಿಯಾಗಿದ್ದು, ನಾಲ್ವರು ವಿದ್ಯಾರ್ಥಿಗಳು ಹಾಗೂ ಮೂವರು ಶಿಕ್ಷಕರು ಗಾಯಗೊಂಡಿದ್ದಾರೆ. ಬೇಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.