SHOCKING NEWS: ಅಂಕಪಟ್ಟಿ ಕೊಡಲು ವಿಳಂಬ ಮಾಡಿದ್ಕೆ ಬೆಂಕಿ ಹಚ್ಚಿ ಪ್ರಾಂಶುಪಾಲರನ್ನೇ ಕೊಂದ ವಿದ್ಯಾರ್ಥಿ

ಧ್ಯಪ್ರದೇಶ: ಅಂಕಪಟ್ಟಿ ಕೊಡಲು ವಿಳಂಬ ಮಾಡಿದ್ರು ಎಂಬ ಕಾರಣಕ್ಕೆ ವಿದ್ಯಾರ್ಥಿಯೊಬ್ಬ ಮಹಿಳಾ ಪ್ರಾಂಶುಪಾಲರ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಂದಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ನಡೆದಿದೆ.

ಫೆಬ್ರವರಿ 20 ರಂದು ಬಿಎಂ ಫಾರ್ಮಸಿ ಕಾಲೇಜಿನ ಪ್ರಾಂಶುಪಾಲರಾದ ವಿಮುಕ್ತ ಶರ್ಮಾ ಮೇಲೆ ಮಾಜಿ ವಿದ್ಯಾರ್ಥಿ ಅಶುತೋಷ್ ಶ್ರೀವಾಸ್ತವ (24) ಎಂಬಾತ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದ.

ಈ ವೇಳೆ, ವಿಮುಕ್ತಾರ ದೇಹ ಶೇ. 90ರಷ್ಟು ಸುಟ್ಟ ಗಾಯಗಳಾಗಿತ್ತು. ಕೂಡಲೇ ಅವರನ್ನು ಚೋಯಿತ್ರಂ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ, ವಿಮುಕ್ತ ಇಂದು (ಶನಿವಾರ) ಮುಂಜಾನೆ 4 ಗಂಟೆ ಸುಮಾರಿಗೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಈ ಬಗ್ಗೆ ಅವರ ಸಹೋದರ ಅರವಿಂದ್ ತಿವಾರಿ ತಿಳಿಸಿದ್ದಾರೆ.

ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಕರ್ತವ್ಯ ನಿರ್ಲಕ್ಷ್ಯದ ಆರೋಪದ ಮೇಲೆ ಮಧ್ಯಪ್ರದೇಶದ ಇಂದೋರ್‌ನಲ್ಲಿ ಪೊಲೀಸ್ ಸಹಾಯಕ ಸಬ್ ಇನ್ಸ್‌ಪೆಕ್ಟರ್ ಅವರನ್ನು ಅಮಾನತುಗೊಳಿಸಲಾಗಿದೆ ಎಂದು ವರದಿಯಾಗಿದೆ. ಏತನ್ಮಧ್ಯೆ, ಇಂದೋರ್ ಆಡಳಿತವು ಅಶುತೋಷ್ ಶ್ರೀವಾಸ್ತವ ವಿರುದ್ಧ ರಾಷ್ಟ್ರೀಯ ಭದ್ರತಾ ಕಾಯ್ದೆ (ಎನ್‌ಎಸ್‌ಎ) ಮೂಲಕ ವಿಚಾರಣೆ ಪ್ರಾರಂಭಿಸಿದೆ.

‘ತನಿಖೆಯ ಸಮಯದಲ್ಲಿ, ಶ್ರೀವಾಸ್ತವ ವಿರುದ್ಧ ಫಾರ್ಮಸಿ ಕಾಲೇಜು ಅಧಿಕಾರಿಗಳು, ಮಹಿಳಾ ಪ್ರಾಂಶುಪಾಲರು ಮತ್ತು ಇತರ ಸಿಬ್ಬಂದಿ ಆರೋಪಿಗಳು ಆತ್ಮಹತ್ಯೆ ಬೆದರಿಕೆ ಹಾಕುತ್ತಿದ್ದಾರೆಂದು ಆರೋಪಿಸಿ ಎರಡು ಮೂರು ದೂರುಗಳನ್ನು ನೀಡಿರುವುದು ನಮಗೆ ಕಂಡುಬಂದಿದೆ’ ಎಂದು ಪೊಲೀಸ್ ವರಿಷ್ಠಾಧಿಕಾರಿ (ಗ್ರಾಮೀಣ) ಭಗವತ್ ಸಿಂಗ್ ವಿರ್ಡೆ ಪಿಟಿಐಗೆ ತಿಳಿಸಿದ್ದಾರೆ.

Check Also

ಕೇರಳದಲ್ಲಿ ‘ವೆಸ್ಟ್‌ ನೈಲ್’ ಜ್ವರದ ಆತಂಕ- ದ.ಕ. ಜಿಲ್ಲೆಯಲ್ಲೂ ವಿಶೇಷ ನಿಗಾ

ಮಂಗಳೂರು: ನೆರೆಯ ಕೇರಳದ ಮಲಪ್ಪುರಂ, ಕೋಯಿಕ್ಕೋಡ್, ತೃಶೂರ್ ಪ್ರದೇಶದಲ್ಲಿ ‘ವೆಸ್ಟ್ ನೈಲ್’ ಜ್ವರ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ …

Leave a Reply

Your email address will not be published. Required fields are marked *

You cannot copy content of this page.