ಲಕ್ನೋ: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಭದ್ರತೆಯಲ್ಲಿ ನಿಯೋಜಿತರಾಗಿದ್ದ ಹೆಡ್ ಕಾನ್ಸ್‌ಟೆಬಲ್ ಆಕಸ್ಮಿಕವಾಗಿ ತನ್ನ ಸರ್ವಿಸ್ ರಿವಾಲ್ವರ್‌ನಿಂದ ತಲೆಗೆ ಗುಂಡು ಹಾರಿಸಿಕೊಂಡು ಮೃತಪಟ್ಟಿದ್ದ ಘಟನೆ ಲಕ್ನೋದಲ್ಲಿ ನಡೆದಿದೆ.
ಸಂದೀಪ್ ಯಾದವ್ ಮೃತಪಟ್ಟ ಪೊಲೀಸ್. ಸಂದೀಪ್ ಯಾದವ್ ಶನಿವಾರದಂದು ಕರ್ತವ್ಯಕ್ಕೆ ಸೇರಬೇಕಿತ್ತು. ಮಸೌಲಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಅವರ ಮನೆಯಲ್ಲಿ ತಮ್ಮ ರಿವಾಲ್ವರ್ ಅನ್ನು ಸ್ವಚ್ಛಗೊಳಿಸುತ್ತಿದ್ದಾಗ ಆಕಸ್ಮಿಕವಾಗಿ ರಿವಾಲ್ವರ್‌ನಿಂದ ಗುಂಡು ಹಾರಿದೆ. ಈ ವೇಳೆ ಗುಂಡು ಸಂದೀಪ್ ಯಾದವ್ ಅವರ ತಲೆಗೆ ತಗುಲಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಘಟನೆಗೆ ಸಂಬಂಧಿಸಿ ಸಂದೀಪ್ ಯಾದವ್ ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಈ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.