ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಕುರಿತು ಬಿಎಸ್​ವೈ ಪ್ರತಿಕ್ರಿಯೆ

ಚಿಕ್ಕಮಗಳೂರು: ಇಂದು ಚಿಕ್ಕಮಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಇನ್ನು ಮೂರು ದಿನಗಳಲ್ಲಿ ಲೋಕಸಭಾ ಚುನಾವಣೆಯ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಲಿದೆ ಎಂದು ಹೇಳಿದರು.

ರಾಜ್ಯದ ಕೆಲ ಕ್ಷೇತ್ರಗಳಲ್ಲಿ ಅಭ್ಯರ್ಥಿ ಗೊಂದಲವಿದೆ ಎನ್ನುವ ಪ್ರಶ್ನೆಗೆ ಪ್ರತಿಕ್ರಿಯಿಸಿದ ಬಿಎಸ್​ವೈ, ಇನ್ನೂ ಎರಡು ಮೂರು ದಿನಗಳಲ್ಲಿ ಎಲ್ಲಾ ಗೊಂದಲ ಬಗೆಹರಿಯಲಿದೆ. ಮೂರು ದಿನದಲ್ಲಿ ಮೊದಲ ಪಟ್ಟಿ ಬಿಡುಗಡೆಯಾಗುವ ಮೂಲಕ ಎಲ್ಲಾ ಗೊಂದಲಕ್ಕೂ ತೆರೆ ಬೀಳಲಿದೆ.
ಪ್ರಧಾನಿ ನರೇಂದ್ರ ಮೋದಿ ಅವರ ಕಾರಣಕ್ಕೆ ಇಡೀ ದೇಶ ಹಾಗೂ ರಾಜ್ಯದಲ್ಲಿ ಬಿಜೆಪಿ ಪರವಾಗಿ ವಾತಾವರಣವಿದೆ ಎಂದರು.

ಹೀಗಾಗಿ ಕರ್ನಾಟಕದ 28 ಕ್ಷೇತ್ರಗಳಲ್ಲಿಯೂ ಬಿಜೆಪಿ ಪ್ರಯತ್ನ ಮಾಡುತ್ತಿದೆ ಜತೆಗೆ ಇದಕ್ಕೆ ಪೂರಕ ವಾತಾವರಣವೂ ಇದೆ. ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ವ್ಯವಸ್ಥಿತ ಷಡ್ಯಂತ್ರ ಹಾಗೂ ಪಿತೂರಿ ನಡೆಯುತ್ತಿದೆ. ಇದನ್ನು ಯಾರು ಮಾಡುತ್ತಿದ್ದಾರೆ ಎಂಬುದು ಎಲ್ಲರಿಗೂ ಗೊತ್ತಿದೆ. ಇಂತಹ ಷಡ್ಯಂತ್ರಗಳಿಂದ ಶೋಭಾ ಕರಂದ್ಲಾಜೆ ದೃತಿಗೆಡುವುದಿಲ್ಲ ಎಂದರು

Check Also

ಗಣಪತಿ ಮೆರವಣಿಗೆಯಲ್ಲಿ ಘರ್ಷಣೆ, ಅಂಗಡಿಗಳಿಗೆ ಬೆಂಕಿ ಹಚ್ಚಿದ ಅನ್ಯಕೋಮಿನ ಯುವಕರು- 144 ಸೆಕ್ಷನ್‌ ಜಾರಿ..!

ಮಂಡ್ಯ: ನಾಗಮಂಗಲ ಪಟ್ಟಣದಲ್ಲಿ ಗಣಪತಿ ಮೂರ್ತಿ ವಿಸರ್ಜನ ಮೆರವಣಿಗೆ ವೇಳೆ ಬುಧವಾರ ರಾತ್ರಿ ಘರ್ಷಣೆ ನಡೆದಿದೆ. ಘಟನೆಯ ನಂತರ ಕೆಲವು …

Leave a Reply

Your email address will not be published. Required fields are marked *

You cannot copy content of this page.