ಕಸ ಎಸೆಯಲು ಹೋದ ಯುವತಿಗೆ ‘ಲೈಂಗಿಕ ಕಿರುಕುಳ’ : ಖಾಸಗಿ ಭಾಗ ಮುಟ್ಟಿ, ಕಿಡಿಗೇಡಿಗಳಿಂದ ಹಲ್ಲೆ

ಸ್ನೇಹಿತನೊಂದಿಗೆ ರಾತ್ರಿಯ ವೇಳೆ ಯುವತಿಯವರು ಕಸ ಎಸೆಯಲು ಹೋದ ಸಂದರ್ಭದಲ್ಲಿ ಕಿಡಿಗೇಡಿಗಳು ಯುವತಿಯ ಖಾಸಗಿ ಭಾಗಗಳನ್ನು ಮುಟ್ಟಿ ಲೈಂಗಿಕವಾಗಿ ಕಿರುಕುಳ ನೀಡಿರುವ ಘಟನೆ ಬೆಂಗಳೂರಿನ ಆಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯ ಕೋರಮಂಗಲದಲ್ಲಿ ಈ ಘಟನೆ ಸಂಭವಿಸಿದೆ.

ರಾತ್ರಿ ವೇಳೆ ಕಸ ಎಸೆಯುವುದಕ್ಕೆ ಹೋಗಿದ್ದ ಯುವತಿಯನ್ನು ಕಿಡಿಗೇಡಿಗಳು ತಬ್ಬಿಕೊಂಡು ಖಾಸಗಿ ಅಂಗಾಂಗಗಳನ್ನು ಮುಟ್ಟಿ ಲೈಂಗಿಕ ಕಿರುಕುಳ ನೀಡಿದ್ದಾರೆ.ಫೆ.18ರಂದು ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಅಂದು ರಾತ್ರಿ ಯುವತಿಯೊಬ್ಬಳು ತನ್ನ ಸ್ನೇಹಿತನೊಂದಿಗೆ ಮಧ್ಯರಾತ್ರಿ ವೇಳೆ ಕಸ ಎಸೆಯಲು ಹೋಗಿದ್ದಳು.

ಈ ವೇಳೆ ಕೊರಮಂಗಲ ಆಟೋ ಸ್ಟಾಂಡ್ ಬಳಿ ಕುಳಿತಿದ್ದ ಪುಂಡರ ಗುಂಪು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಯುವಕ ಹಾಗೂ ಯುವತಿಯನ್ನು ಹಿಂಬಾಲಿಸಿಕೊಂಡು ಹೋಗಿದೆ.ನಂತರ, ನಿರ್ಜನ ಪ್ರದೇಶದಲ್ಲಿ ಕಸ ಎಸೆದು ವಾಪಸ್ ಬರುವಾಗ ಅವರನ್ನು ಹಿಂಬಾಲಿಸಿದ ಪುಂಡರ ಗುಂಪಿನಲ್ಲಿದ್ದ ನಾಲ್ವರು, ಯುವತಿಯನ್ನು ಅಡ್ಡಗಟ್ಟಿ ಹಿಡಿದುಕೊಂಡಿದ್ದಾರೆ.

ನಂತರ, ಯುವತಿಯ ಬಾಯಿ ಮುಚ್ಚಿ ಹಿಡಿದುಕೊಂಡು ಆಕೆಯ ಖಾಸಗಿ ಅಂಗಗಳನ್ನು ಕೆಟ್ಟದಾಗಿ ಸ್ಪರ್ಶ ಮಾಡಿದ್ದಾರೆ. ಇದಕ್ಕೆ ಯುವತಿ ತೀವ್ರ ಪ್ರತಿರೋಧ ತೋರಿದಾಗ ಆಕೆಯ ಮೇಲೆ ಹಲ್ಲೆ ಮಾಡಿದ್ದಾರೆ. ಹಲ್ಲೆಯಿಂದ ಯುವತಿ ಗಾಯಗೊಂಡಿದ್ದಾಳೆ. ಈ ವೇಳೆ ತಡೆಯಲು ಮುಂದಾದ ಯುವತಿಯ ಸ್ನೇಹಿತನಿಗೂ ಥಳಿಸಿದ್ದಾರೆ. ಘಟನೆ ಕುರಿತಂತೆ ಆಡುಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Check Also

ಶಿರಾಡಿಘಾಟ್​ನಲ್ಲಿ ಮತ್ತೆ ಗುಡ್ಡ ಕುಸಿತ : ರಾಷ್ಟ್ರೀಯ ಹೆದ್ದಾರಿ ಬಂದ್, ಸಂಚಾರ ಸಂಪೂರ್ಣ ಸ್ಥಗಿತ..!

ಹಾಸನ: ಭಾರೀ ಮಳೆಗೆ ಸಕಲೇಶಪುರ ಎತ್ತಿನಹಳ್ಳದ ಸಮೀಪ ಏಕಾಏಕಿ ಗುಡ್ಡ ಕುಸಿದಿದ್ದು, ಮತ್ತೆ ಶಿರಾಡಿ ಘಾಟ್‌ನ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ವಾಹನ …

Leave a Reply

Your email address will not be published. Required fields are marked *

You cannot copy content of this page.