March 22, 2026
WhatsApp Image 2024-05-23 at 4.01.09 PM

ಉಡುಪಿ: ಶಿಕ್ಷಣ ಕ್ಷೇತ್ರ ಮಣಿಪಾಲದಲ್ಲಿ ರಾಜಾರೋಷವಾಗಿ ರೌಡಿಗಳು ಗ್ಯಾಂಗ್ ವಾರ್ ನಡೆಸಿದ್ದಾರೆ. ಸಿನಿಮೀಯ ರೀತಿಯಲ್ಲಿ ಕಾರುಗಳನ್ನು ಬಳಸಿ ಕಾದಾಡಿದ್ದಾರೆ. ಕ್ರಿಮಿನಲ್ ಗಳಿಗೆ ಆಳುವ ಸರ್ಕಾರದ ಕಾನೂನಿನ ಭಯ ಇಲ್ಲದಂತಾಗಿದೆ ಎಂಬುದಕ್ಕೆ ಇದೊಂದು ಜ್ವಲಂತ ಉದಾಹರಣೆ. ಉಡುಪಿ, ದಕ್ಷಿಣ ಕನ್ನಡದಂಥ‌ ಜಿಲ್ಲೆಗಳಲ್ಲಿ ಮಾತ್ರವಲ್ಲ, ಇಡೀ ರಾಜ್ಯದಲ್ಲಿ ಈಗ ಕಾನೂನು- ಸುವ್ಯವಸ್ಥೆ ಕುಸಿದು ಬಿದ್ದಿದೆ. ಪೊಲೀಸ್ ಠಾಣೆಗಳನ್ನು ರಾಜಕೀಯ ದ್ವೇಷ ತೀರಿಸಿಕೊಳ್ಳುವ ಅಸ್ತ್ರವಾಗಿ ಬಳಸಿಕೊಳ್ಳುವುದಕ್ಕೆ ಕಾಂಗ್ರೆಸ್ ಸರ್ಕಾರ ಮುಂದಾಗಿದ್ದರ ಪರಿಣಾಮವಾಗಿ ಇಂದು ಕ್ರಿಮಿನಲ್ ಗಳು ವಿಜೃಂಭಿಸುವಂತಾಗಿದೆ.ಇದು ಗೃಹ ಇಲಾಖೆ ಹಾಗೂ ಗೃಹ ಸಚಿವರ ವೈಫಲ್ಯಕ್ಕೆ ಹಿಡಿದ ಕೈಗನ್ನಡಿ. ಸಿದ್ದರಾಮಯ್ಯನವರೇ ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಿರುವ ನಿಮಗೆ ಸ್ವಾಗತ. ಆದರೆ ಇಲ್ಲಿಂದ ಹೊರಡುವುದಕ್ಕೆ ಮೊದಲು ಕೆಲ ಪ್ರಶ್ನೆಗಳಿಗೆ ಉತ್ತರಿಸಿ ಹೋಗಿ. ಕಾನೂನು-ಸುವ್ಯವಸ್ಥೆ ಕಾಪಾಡಲಾರದ ಗೃಹ ಸಚಿವರಿಂದ ಎಂದು ರಾಜೀನಾಮೆ ಪಡೆಯುತ್ತೀರಿ ?ಪೊಲೀಸ್ ಠಾಣೆಯನ್ನು ಆಳುವ ಸರ್ಕಾರದ ಆಳಾಗಿಸಿಕೊಂಡಿರುವುದಕ್ಕೆ ಎಂದು ಮುಕ್ತಾಯ ಹಾಡುತ್ತೀರಿ ? ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಪ್ರಶ್ನೆ ಮಾಡಿದ್ದಾರೆ.

About The Author

Leave a Reply

Your email address will not be published. Required fields are marked *

You cannot copy content of this page.