ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆ ಹಿನ್ನೆಲೆ ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಉಡುಪಿ: ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆಯ ರೆಡ್ ಅಲರ್ಟ್ ಮುನ್ಸೂಚನೆಯಂತೆ ಹೆಚ್ಚು ಮಳೆಯಾಗುತ್ತಿರುವುದರಿಂದ ಮುಂಜಾಗೃತ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ದಿನಾಂಕ:26.07.2023 ರಂದು ಉಡುಪಿ ಜಿಲ್ಲೆಯ ಎಲ್ಲಾ ತಾಲೂಕಿನ ಅಂಗನವಾಡಿ ಕೇಂದ್ರಗಳಿಗೆ, ಹಾಗೂ ಪ್ರಾಥಮಿಕ, ಪ್ರೌಢ ಶಾಲೆ, ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ರಜೆಯನ್ನು ಘೋಷಿಸಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಆದೇಶಿಸಿದ್ದಾರೆ.

ಉಡುಪಿ ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆಯಾಗುತ್ತಿದ್ದು, ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಾಗಿದ್ದು, ನದಿಗಳು , ಹಳ್ಳಗಳು ,ತೋಡುಗಳು ತುಂಬಿ ಹರಿಯುತ್ತಿರುವ ಕಾರಣ, ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲೆಯ ಸಾರ್ವಜನಿಕರು ಮತ್ತು ಜಿಲ್ಲೆಗೆ ಆಗಮಿಸುವ ಪ್ರವಾಸಿಗರು , ಬೀಚ್ ಗಳು, ನದಿಗಳು ಹಾಗು ಜಲಪಾತಗಳ ಬಳಿ ತೆರಳದಂತೆ ಹಾಗೂ ಫೋಟೋ ಮತ್ತು ವಿಡಿಯೋ ಚಿತ್ರೀಕರಣ ಮಾಡುವುದನ್ನು ಕಟ್ಟು ನಿಟ್ಟಾಗಿ ನಿಷೇಧಿಸಲಾಗಿದೆ.

Check Also

ಉಡುಪಿ: ಗೋಕಳ್ಳತನ ನಡೆಸಿದ್ದ ಇಬ್ಬರು ಆರೋಪಿಗಳ ಬಂಧನ..!

ಕುಂದಾಪುರ: ಜೂನ್ 25ರಂದು ರಾತ್ರಿ ಶಂಕರನಾರಾಯಣ ಪೇಟೆಯಲ್ಲಿ ನಡೆದ ಗೋ ಕಳ್ಳತನಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಶಂಕರನಾರಾಯಣ ಪೋಲಿಸರು ಬಂಧಿಸಿದ್ದಾರೆ. …

Leave a Reply

Your email address will not be published. Required fields are marked *

You cannot copy content of this page.