ಅಯೋಧ್ಯೆಯ ಶ್ರೀರಾಮಮಂದಿರ ಟ್ರಸ್ಟ್‌ಗೆ ದಾನಿಯೊಬ್ಬರು ಬರೋಬ್ಬರಿ 2100 ಕೋಟಿ ಮೊತ್ತದ ಚಕ್ ಕಳುಹಿಸಿದ್ದಾರೆ. ಈ ಬಗ್ಗೆ ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ರಾಯ್ ಮಾತನಾಡಿ ಪ್ರಧಾನ ಮಂತ್ರಿಗಳ ಪರಿಹಾರ ನಿಧಿಯ ಹೆಸರಿನಲ್ಲಿ ಬರೆದ ಚೆಕ್ ಅನ್ನು ಅಂಚೆ ಮೂಲಕ ಟ್ರಸ್ಟ್‌ಗೆ ಕಳುಹಿಸಲಾಗಿದೆ ಎಂದು ಖಚಿತಪಡಿಸಿದ್ದಾರೆ. ಎರಡು ದಿನಗಳ ಹಿಂದೆಯೇ ಚೆಕ್ ತಮ್ಮ ಕಚೇರಿಗೆ ತಲುಪಿದೆ ಎಂದು ಹೇಳಿದ್ದಾರೆ. ಈ ಬಗ್ಗೆ ಸಂಪೂರ್ಣ ಮಾಹಿತಿ ಪಡೆಯಲು ಪ್ರಧಾನಿ ಕಚೇರಿಗೆ ಕಳುಹಿಸುವಂತೆ ಟ್ರಸ್ಟ್‌ನ ಅಧಿಕಾರಿಗಳಿಗೆ ಸೂಚಿಸಿದ್ದೇವೆ ಎಂದು ತಿಳಿಸಿದ್ದಾರೆ. ಚೆಕ್ ಮೇಲೆ ದಾನಿ ಹೆಸರು, ವಿಳಾಸ, ಫೋನ್ ನಂಬರ್ ಇದೆ.
Check Also
ಉಡುಪಿ: ಮೂರೂವರೆ ವರ್ಷದ ಕಂದಮ್ಮನಿಗೆ ಮನಸೋಇಚ್ಚೆ ಹಲ್ಲೆ- ಪ್ರಜ್ಞಾಹೀನ ಸ್ಥಿತಿಯಲ್ಲಿರುವ ಮಗು
ಉಡುಪಿ: ಮೂರೂವರೆ ವರ್ಷದ ಮಗುವಿನ ಮೇಲೆ ತೀವ್ರ ತರಹದ ಹಲ್ಲೆ ನಡೆದಿದ್ದು, ಸದ್ಯ ಪ್ರಜ್ಞಾಹೀನ ಸ್ಥಿತಿಯಲ್ಲಿರುವ ಮಗುವಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ …