ಅಯೋಧ್ಯೆಯಲ್ಲಿ ಶ್ರೀ ರಾಮನ ಪ್ರತಿಷ್ಠಾ ಮಹೋತ್ಸವ; ಅಕ್ಷತೆ ವಿತರಣಾ ಕಾರ್ಯಕ್ರಮದ ಕುರಿತು ಮನೆ ಮನೆ ಸಂಪರ್ಕ ಅಭಿಯಾನ

ಪುತ್ತೂರು: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ಮಂದಿರದಲ್ಲಿ ಜ.22 ರಂದು ನಡೆಯಲಿರುವ ಶ್ರೀ ರಾಮನ ಪ್ರತಿಷ್ಠಾ ಮಹೋತ್ಸವದ ಅಂಗವಾಗಿ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ವತಿಯಿಂದ ದೇಶಾದ್ಯಂತ ನಡೆಯುವ ಅಕ್ಷತೆ ವಿತರಣಾ ಕಾರ್ಯಕ್ರಮದ ಕುರಿತು ಮನೆ ಮನೆ ಸಂಪರ್ಕ ಅಭಿಯಾನ ಜ.1 ರಿಂದ 15 ರ ತನಕ ನಡೆಯಲಿದ್ದು ನ.27 ರಂದು ಆಯೋಧ್ಯೆಯಿಂದ ಬರಲಿರುವ ಅಕ್ಷತೆಯನ್ನು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮುಂಭಾಗ ಸ್ವಾಗತಿಸಲಾಗುವುದು ಎಂದು ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಜಿಲ್ಲಾ ಸಮಿತಿ ಸಂಚಾಲಕ ಡಾ.ಕೃಷ್ಣ ಪ್ರಸನ್ನ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ.

ಅಭಿಯಾನದ ಯಶಸ್ಸಿಗೆ ಈಗಾಗಲೇ ಜಿಲ್ಲಾ ಮಟ್ಟದಲ್ಲಿ ಸಮಿತಿ ರಚಿಸಲಾಗಿದ್ದು, ಮುಂದಿನ ದಿನಗಳಲ್ಲಿ ತಾಲೂಕು ಮಟ್ಟದಲ್ಲಿ ಸಮಿತಿಗಳನ್ನು ರಚಿಸಲಾಗುವುದು. ಅಯೋಧ್ಯೆಯಿಂದ ಅಕ್ಷತೆ ನ.27 ರಂದು ಜಿಲ್ಲೆಗೆ ಆಗಮಿಸುವ ಅಕ್ಷತೆಯನ್ನು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಧ್ಯಾಹ್ನ 12 ಗಂಟೆಗೆ ಸ್ವಾಗತಿಸಿ ಬಳಿಕ ದೇವಸ್ಥಾನಕ್ಕೆ ಕೊಂಡೊಯ್ಯುವ ಕಾರ್ಯಕ್ರಮ ನಡೆಯಲಿದೆ. ಬಳಿಕ ಅಕ್ಷತೆಯನ್ನು ಶ್ರೀ ರಾಮನ ಪ್ರತಿಷ್ಠಾ ಪತ್ರಕದ ಜೊತೆಗೆ ಜಿಲ್ಲೆಯ ಪ್ರತೀ ಹಿಂದೂ ಮನೆಗೂ ವಿತರಿಸುವ ಯೋಜನೆ ಮಾಡಲಾಗುವುದು. ಜ.1 ರಿಂದ 15 ರ ತನಕ ಮನೆ ಮನೆ ಸಂಪರ್ಕ ಅಭಿಯಾನದ ನಡುವೆ ಅಭಿಯಾನಕ್ಕೆ ವೇಗ ನೀಡುವ ನಿಟ್ಟಿನಲ್ಲಿ ಜ.7 ರಂದು ಮಹಾಸಂಪರ್ಕ ಅಭಿಯಾನ ನಡೆಯಲಿದೆ ಎಂದು ತಿಳಿಸಿದ ಅವರು ಶ್ರೀರಾಮನ ಪ್ರಾಣಪ್ರತಿಷ್ಠೆ ಸಂದರ್ಭ ಪ್ರತೀ ಹಿಂದೂ ಮನೆಯಲ್ಲಿ ಐದು ದೀಪಗಳನ್ನು ಹಚ್ಚುವ ಜತೆಗೆ ಪ್ರತೀ ಹಿಂದೂ ಧಾರ್ಮಿಕ ಕೇಂದ್ರಗಳಲ್ಲಿ ಶ್ರೀ ರಾಮ ತಾರಕ ಮಂತ್ರ ಜಪದೊಂದಿಗೆ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಲುವಂತೆ ವಿನಂತಿಸಿದರು.

Check Also

ವಾರಾಣಸಿ ಕ್ಷೇತ್ರದಿಂದ ಪ್ರಧಾನಿ ಮೋದಿ ಭರ್ಜರಿ ಗೆಲುವು

ವಾರಾಣಸಿ : ಪ್ರಧಾನಿ ಮೋದಿ ವಾರಾಣಸಿ ಕ್ಷೇತ್ರದಿಂದ ಭರ್ಜರಿ ಗೆಲುವು ಸಾಧಿಸಿದ್ದಾರೆ. ಸತತ ಮೂರನೇ ಬಾರಿಗೆ ಮೋದಿ ವಾರಾಣಸಿ ಕ್ಷೇತ್ರದಿಂದ …

Leave a Reply

Your email address will not be published. Required fields are marked *

You cannot copy content of this page.