
ಉಡುಪಿ: ಹಿಂದೂ ಸಂಘಟನೆಗಳಿಂದ ಇಂದು ಎಸ್ಪಿ ಕಚೇರಿಯೆದುರು ಪ್ರತಿಭಟನೆ ನಡೆಯಲಿದ್ದು, ಎಸ್ ಪಿ ಕಚೇರಿ ಮುಂಭಾಗದಲ್ಲಿ ಭಾರಿ ಭದ್ರತೆ ಮಾಡಲಾಗಿದೆ. ಹಿಂದೂ ಜಾಗರಣ ವೇದಿಕೆಯ ನೇತೃತ್ವದಲ್ಲಿ ಪ್ರತಿಭಟನಾ ಸಭೆ ಆಯೋಜನೆಗೊಂಡಿದೆ.
ಹಿಂದೂ ಕಾರ್ಯಕರ್ತರ ಮೇಲೆ ಪೊಲೀಸ್ ಇಲಾಖೆ ನಿರಂತರ ದಬ್ಬಾಳಿಕೆ ಖಂಡಿಸಿ ಈ ಪ್ರತಿಭಟನಾ ಸಭೆ ಆಯೋಜಿಸಲಾಗಿದೆ. ಹಿಂದೂ ಸಂಘಟನೆಗಳ ಕಾರ್ಯಕರ್ತರು, ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ನೇತೃತ್ವದಲ್ಲಿ ಬ್ರಹ್ಮಗಿರಿ ಸರ್ಕಲ್ ನಿಂದ ಕಾಲ್ನಡಿಗೆ ಮೂಲಕ ಎಸ್ಪಿ ಕಚೇರಿ ಆವರಣದಲ್ಲಿ ಸೇರಲಿದ್ದಾರೆ. ಈ ಹಿನ್ನೆಲೆಯಲ್ಲಿ ಎಸ್ ಪಿ ಕಚೇರಿ ಮುಂಭಾಗದಲ್ಲಿ ನೂರಾರು ಪೊಲೀಸರನ್ನು ಭದ್ರತೆಗಾಗಿ ನಿಯೋಜಿಸಲಾಗಿದೆ.ಎಸ್ ಪಿ ಕಚೇರಿಗೆ ಒಳ ಪ್ರವೇಶಿಸದಂತೆ ಪೊಲೀಸರು ಬ್ಯಾರಿಕೇಡ್ ಗಳನ್ನು ಅಳವಡಿಸಿದ್ದಾರೆ.
ಇತ್ತೀಚಿಗೆ ಕಾರ್ಕಳದಲ್ಲಿ ಹಿಂದೂ ಕಾರ್ಯಕರ್ತರ ಮೇಲೆ ಪೊಲೀಸರು ಸುಮೋಟೊ ಪ್ರಕರಣ ದಾಖಲಿಸಿದ್ದನ್ನು ಇಲ್ಲಿ ಸ್ಮರಿಸಬಹುದು.
