ಉಡುಪಿ : ಕಟಪಾಡಿ- ಶಿರ್ವ ರಸ್ತೆಯಲ್ಲಿ ಕಾರು ಮತ್ತು ಟೆಂಪೋ ಮಧ್ಯೆ ಮುಖಾಮುಖಿ ಢಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದರೆ ಯುವಕ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಕೊನೆಯುಸಿರೆಳೆದಿದ್ದಾನೆ.
ಉಡುಪಿ ಜಿಲ್ಲೆಯ ಕಟಪಾಡಿ – ಶಿರ್ವ ಮುಖ್ಯರಸ್ತೆಯ ಪಂಜಿಮಾರು ಪಾಲಮೆ ಬಳಿ ನಿನ್ನೆ ಸಂಜೆ ಈ ದುರ್ಘಟನೆ ಸಂಭವಿಸಿದೆ. ಮೂಡಬಿದಿರೆಯಿಂದ ಉಡುಪಿ ಕಡೆಗೆ ಬರುತ್ತಿದ್ದ ಕಾರಿಗೆ ಕಟಪಾಡಿಯಿಂದ ಶಿರ್ವ ಕಡೆಗೆ ತೆರಳುತ್ತಿದ್ದ ಟೆಂಪೋ ಮುಖಾಮುಖಿ ಡಿಕ್ಕಿಯಾಗಿದೆ. ಅಪಘಾತದ ತೀವತ್ರೆಗೆ ಕಾರಿನಲ್ಲಿದ ಇದ್ದ ಮಹಿಳೆ ಸ್ಥಳದಲ್ಲೆ ಸಾವನ್ನಪ್ಪಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಯುವಕ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟಿದ್ದಾನೆ. ಅಪಘಾತಕ್ಕೆ ಈಡಾದ ಕಾರು ಬೆಂಗಳೂರು ಮೂಲದ ಎಂಬುದು ತಿಳಿದು ಬಂದಿದ್ದು, ಮೃತರ ಸ್ಪಷ್ಟ ಗುರುತು ಇನ್ನಷ್ಟೇ ಲಭ್ಯವಾಗಬೇಕಾಗಿದೆ. ಅಪಘಾತ ನಡೆದ ಸ್ಥಳದಲ್ಲಿ ದೊರೆತ ಲೈಸೆನ್ಸ್ ಪ್ರಕಾರ ಬೆಂಗಳೂರಿನ 27 ಪವನ್ ಬಿ. ಎಸ್ ಎಂದು ಗುರುತಿಸಲಾಗಿದೆ. ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.