ಸಂಪಾಜೆ : ಕಂಟೈನರ್ ಲಾರಿ ಮತ್ತು ಸ್ಕೂಟಿ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಸ್ಕೂಟರ್ ನಲ್ಲಿದ್ದ ಇಬ್ಬರು ಸಾವನಪ್ಪಿದ ಘಟನೆ ಸಂಪಾಜೆ ಬಳಿಯ ಕೊಯನಾಡು ಸಮೀಪದ ಚಡಾವು ಎಂಬಲ್ಲಿ ನಡೆದಿದೆ.
ಮೃತರನ್ನು ಸ್ಕೂಟರ್ ಸವಾರ ಚಿದಾನಂದ ಆಚಾರ್ಯ ಎಂದು ಗುರುತಿಸಲಾಗಿದೆ. ಸ್ಕೂಟರ್ ನಲ್ಲಿದ್ದ ಮಹಿಳೆಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
ಮಡಿಕೇರಿ ಕಡೆಗೆ ತೆರಳುತ್ತಿದ್ದ ಕಂಟೈನರ್ ಲಾರಿ ಹಾಗೂ ಮಡಿಕೇರಿ ಕಡೆಯಿಂದ ಬರುತ್ತಿದ್ದ ಸ್ಕೂಟರ್ ನಡುವೆ ಅಪಘಾತ ಸಂಭವಸಿದದ್ದು, ಅಪಘಾತದ ರಭಸಕ್ಕೆ ಸ್ಕೂಟರ್ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಲಾರಿ ರಸ್ತೆ ಬದಿಯ ತಡೆಗೋಡೆಯನ್ನು ದಾಟಿ ಕಾಡಿನೊಳಗೆ ನುಗ್ಗಿದೆ. ಈ ಘಟನೆ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.